ಈಶಾನ್ಯ ದೆಹಲಿ ಹಿಂಸಾಚಾರ; ಕುಮ್ಮಕ್ಕು ನೀಡಿದ ಆರೋಪದಡಿ ಪಿಎಫ್​ಐ ಅಧ್ಯಕ್ಷ ಫರ್ವೇಜ್​, ಕಾರ್ಯದರ್ಶಿ ಇಲಿಯಾಸ್​ ಅರೆಸ್ಟ್​

Fervege 12 March 20
Published on

ನವದೆಹಲಿ: ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪದಡಿ ಪಾಪ್ಯುಲರ್​ ಫ್ರಂಟ್ ಆಫ್​ ಇಂಡಿಯಾದ (ಪಿಎಫ್​ಐ) ಅಧ್ಯಕ್ಷ ಫರ್ವೇಜ್​ ಅಹಮದ್ ಮತ್ತು ಕಾರ್ಯದರ್ಶಿ ಮಹಮ್ಮದ್​ ಇಲಿಯಾಸ್​ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವೆ ಸಂಘರ್ಷ ಏರ್ಪಟ್ಟು, ಅದು ಹಿಂಸಾಚಾರವಾಗಿ ಮಾರ್ಪಟ್ಟಿತ್ತು. ಸುಮಾರು 53 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸರು 712 ಮಂದಿಯ ವಿರುದ್ಧ ಎಫ್​ಐಆರ್​ ದಾಖಲಿಸಿ, 200 ಜನರನ್ನು ಬಂಧಿಸಿದ್ದರು.

ಹಿಂಸಾಚಾರದಲ್ಲಿ ದಂಗೆಕೋರರನ್ನು ಪ್ರಚೋದಿಸುವ ಕೆಲಸವನ್ನು ಇವರಿಬ್ಬರೂ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹಾಗೇ ಈ ವೇಳೆ ಪ್ರತಿಭಟನಾಕಾರರಿಗೆ ಧನಸಹಾಯವನ್ನೂ ಮಾಡಿದ್ದಾರೆ. ಹಾಗಾಗಿ ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ಫರ್ವೇಜ್ ಮತ್ತು ಇಲಿಯಾಸ್​ನನ್ನು ದೆಹಲಿಯ ಪಟಿಯಾಲಾ ಕೋರ್ಟ್​ಗೆ ಹಾಜರುಪಡಿಸಲಾಗುವುದು ಎಂದಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net