

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಲಿದೆ. ಆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅನ್ಲಾಕ್ ಅನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ. ನಾಳೆಯಿಂದ ಎಲ್ಲ ಅಂಗಡಿ ಮುಗ್ಗಟ್ಟುಗಳು ಹಾಗೂ ಮಾಲ್ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
ನಾಳೆ ಬೆಳಗ್ಗೆ 5 ಗಂಟೆಯಿಂದಲೇ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಎಲ್ಲ ರೀತಿಯ ಅಂಗಡಿಗಳನ್ನು ತೆರೆಯಲು ಅನುಮತಿ ಇದೆ. ಮಾರುಕಟ್ಟೆ ಹಾಗೂ ಮಾಲ್ಗಳನ್ನು ಸಹ ತೆರೆಯಲು ಅವಕಾಶವಿದೆ. ಒಂದು ವಾರದ ಕಾಲ ಮಾರುಕಟ್ಟೆ ಹಾಗೂ ಮಾಲ್ಗಳನ್ನು ತೆರೆದು ನೋಡಲಾಗುವುದು. ಒಂದು ವೇಳೆ ಈ ಅವಧಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದರೆ ಮತ್ತೆ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು. ಇಲ್ಲವಾದರೆ ಅನ್ಲಾಕ್ ಮುಂದುವರಿಯಲಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಅಂಗಡಿಗಳ ಜತೆ ಹೋಟೆಲ್ಗಳ ಮೇಲಿನ ನಿರ್ಬಂಧವನ್ನು ಸರ್ಕಾರ ಸಡಿಲಿಸಿದೆ. ಎಲ್ಲ ಹೋಟೆಲ್ಗಳು ಸಂಪೂರ್ಣವಾಗಿ ಬಾಗಿಲು ತೆರೆಯಲು ಅನುಮತಿ ಇದ್ದು, ಶೇ. 50 ಆಸನ ಭರ್ತಿ ಮಾಡಲು ಅವಕಾಶವಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. (ಏಜೆನ್ಸೀಸ್)