ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ

Crime Logo
Published on

ಬೆಂಗಳೂರು: ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಗಳು ುಡ್ ಡೆಲಿವರಿ ಬಾಯ್ ಮೇಲೆ ಹಲ್ಲೆ ನಡೆಸಿದ್ದು, ಈ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಸ್ಟ್ ಆ್ ಕೋರ್ಡ್ ರಸ್ತೆಯ ಮೋದಿ ಆಸ್ಪತ್ರೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ.

ಹಲ್ಲೆಗೊಳಗಾಗಿರುವ ರಾಜಸ್ತಾನ ಮೂಲದ ಪೀಮ್ರಾಮ್, ಆಸ್ಪತ್ರೆಗೆ ದಾಖಲಾಗಿದ್ದು, ಅವರ ಮುಖ ಮತ್ತು ತಲೆಗೆ ಗಾಯವಾಗಿದೆ.

ಪೀಮ್ರಾಮ್, ಭಾನುವಾರ (ಜು.೧೩) ರಾತ್ರಿ ವೆಸ್ಟ್ ಆ್ ಕೋರ್ಡ್ ರಸ್ತೆ ಮಾರ್ಗವಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಮೋದಿ ಆಸ್ಪತ್ರೆ ಜಂಕ್ಷನ್‌ನಲ್ಲಿ ರೆಡ್ ಸಿಗ್ನಲ್ ಇದ್ದ ಕಾರಣಕ್ಕೆ ವಾಹನ ನಿಲ್ಲಿಸಿದ್ದರು. ಈ ವೇಳೆ ಹಿಂದಿನಿಂದ ಬೈಕ್‌ನಲ್ಲಿ ಬಂದ ಮೂವರು, ದಾರಿ ಬಿಡು ತಾವು ಮುಂದೆ ಹೋಗುತ್ತೇವೆ ಎಂದು ಪೀಮ್ರಾಮ್‌ಗೆ ಕೇಳಿದ್ದರು. ಆಗ ಪೀಮ್ರಾಮ್, ಗ್ರೀನ್ ಸಿಗ್ನಲ್ ಬರಲಿ ಮುಂದೆ ಹೋಗುತ್ತೇನೆ ಎಂದು ಹೇಳಿದ್ದರು. ಇಷ್ಟಕ್ಕೆ ಸಿಟ್ಟಿಗೆದ್ದ ಆರೋಪಿಗಳು ಪೀಮ್ರಾಮ್ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯ ದೃಶ್ಯಾವಳಿ ಸಮೀಪದ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net