

ಬೆಂಗಳೂರು:
ರಾಜ್ಯಕ್ಕೆ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ.
ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಲಿರುವ ಅವರು, ರಾಜ್ಯದಲ್ಲಿ ಕೃಷಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಬಗ್ಗೆ ಮತ್ತು ಅದಕ್ಕೆ ಅಗತ್ಯವಿರುವ ಇನ್ನಷ್ಟು ಅನುದಾನವನ್ನು ಕೇಳಲು ನಿರ್ಧರಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಕೃಷಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಪೂರ್ವಭಾವಿಯಾಗಿ ಚರ್ಚೆ ನಡೆಸಿರುವ ಅವರು, ಕೇಂದ್ರದಲ್ಲಿ ಇನ್ನೂ ಏನೇನು ವಿಷಯದ ಬಗ್ಗೆ ಚರ್ಚೆ ಮಾಡಬೇಕು ಎನ್ನುವ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ನಿಗಮದ ಸಭೆ
ಇದೇ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮದ 21ನೇ ಆಡಳಿತ ಮಂಡಳಿ ಸಭೆ ನಡೆಯಿತು.
ನಿಗಮದ ಕಾರ್ಯ ಚಟುವಟಿಕೆ ಮತ್ತು ಆರ್ಥಿಕ ಸ್ಥಿತಿಗಳ ಬಗ್ಗೆ ಸಚಿವರು ಪರಾಮರ್ಶೆ ಮಾಡಿದರು.
ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತ ವೈ.ಎಸ್.ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.