

ಅಮೆರಿಕ: ( plane catches fire ) ಒರ್ಲ್ಯಾಂಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದಾಗ್ಯೂ, ಬೆಂಕಿಯ ಬಗ್ಗೆ ಮಾಹಿತಿ ಸಕಾಲದಲ್ಲಿ ಸಿಕ್ಕಿದ್ದರಿಂದ, ವಿಮಾನದಲ್ಲಿದ್ದ 282 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಟ್ಲಾಂಟಾಗೆ ಹೊರಟಿದ್ದ ವಿಮಾನದ ಎರಡು ಎಂಜಿನ್‌ಗಳಲ್ಲಿ ಒಂದು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬೆಂಕಿಗೆ ಆಹುತಿಯಾಗಿದೆ. ಬಲ ಎಂಜಿನ್‌ನಿಂದ ಬೆಂಕಿ ಕಾಣಿಸಿಕೊಂಡ ಘಟನೆಯ ಬಗ್ಗೆ ಎಫ್‌ಎಎ ತನಿಖೆ ಆರಂಭಿಸಿದೆ. ಈ ದೃಶ್ಯವನ್ನು ಟರ್ಮಿನಲ್‌ನಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.
ಒರ್ಲ್ಯಾಂಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ ಲೈನ್ಸ್ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ನಂತರ ಪ್ರಯಾಣಿಕರನ್ನು ತುರ್ತು ಸ್ಲೈಡ್‌ಗಳ ಮೂಲಕ ಸ್ಥಳಾಂತರಿಸಬೇಕಾಯಿತು.
ಅಪಘಾತದ ಸಮಯದಲ್ಲಿ ವಿಮಾನದಲ್ಲಿ 282 ಪ್ರಯಾಣಿಕರು ಇದ್ದರು. ಪ್ರಯಾಣಿಕರಲ್ಲಿ ಯಾರಿಗೂ ಗಾಯಗಳಾಗಿಲ್ಲದ ಕಾರಣ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ವಿಮಾನದ ಎರಡು ಎಂಜಿನ್‌ಗಳಲ್ಲಿ ಒಂದರ ಟೈಲ್‌ಪೈಪ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಡೆಲ್ಟಾ ವಿಮಾನ ಸಿಬ್ಬಂದಿ ತಕ್ಷಣ ಪ್ರತಿಕ್ರಿಯಿಸಿದರು. ಕ್ಯಾಬಿನ್‌ನಿಂದ ತುರ್ತು ನಿರ್ಗಮನದ ಮೂಲಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ಈ ಘಟನೆ ಕುರಿತಾಗಿ ಪ್ರತಿಕ್ರಿಯಿಸಿದ ವಿಮಾನಯಾನ ಸಂಸ್ಥೆಯು, ತನ್ನ ಪ್ರಯಾಣಿಕರು ತುಂಬಾ ಸಹಕಾರ ನೀಡಿದ್ದಾರೆ. ವಿಮಾನಯಾನ ಸಂಸ್ಥೆಯು ಪ್ರಯಾಣಿಕರಲ್ಲಿ ಕ್ಷಮೆಯಾಚಿಸುತ್ತದೆ. ಈ ಖುರಿತಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದರು.