ಪ್ರೌಢಶಾಲೆ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

sgr high school
ಮಾಸೂರು ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಫ್ರಾಂಕಿ ಫ್ರಾನ್ಸಿಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರು ಎಸಿ ಆರ್.ಯತೀಶ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಮಾ ಜೋಗಿ, ನಾರಾಯಣಮೂರ್ತಿ, ಕೆ.ವಿ.ಪ್ರವೀಣ್, ನವೀನ್, ಸುನೀಲ್ ಇತರರಿದ್ದರು.
Published on

ಸಾಗರ: ತಾಲೂಕಿನ ಮಾಸೂರು ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಫ್ರಾಂಕಿ ಫ್ರಾನ್ಸಿಸ್ ಎಂಬುವವರು ಮಕ್ಕಳ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಉಪವಿಭಾಗಾಧಿಕಾರಿ ಆರ್.ಯತೀಶ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಪ್ರತಿಭಾ ಕಾರಂಜಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬರುವ ಏಸು ಅವರ ಭಾವಚಿತ್ರ ಇರುವ ಹಾಡನ್ನು ಮಕ್ಕಳಿಂದ ಹಾಡಿಸಲಾಗಿದೆ. ಈ ಪ್ರಾರ್ಥನಾ ಗೀತೆಯನ್ನು ಚಿತ್ರಿಸಿ ಫೇಸ್‌ಬುಕ್ ಲೈವ್‌ನಲ್ಲಿ ಹರಿಬಿಡಲಾಗಿದೆ. ಪ್ರತಿಭಾ ಕಾರಂಜಿಯ ಯಾವುದೇ ವಿಡಿಯೋ ಬಿಡದೆ ಕೇವಲ ಪ್ರಾರ್ಥನೆಯ ವಿಡಿಯೋ ಮಾತ್ರ ಹರಿಬಿಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿದರು.
ಶಾಲೆಯಲ್ಲಿ ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳಿಲ್ಲ. ಆದರೆ ವಿಜ್ಞಾನ ಶಿಕ್ಷಕ ಫ್ರಾಂಕಿ ಫ್ರಾನ್ಸಿಸ್ ಇಂತಹ ಕೆಲಸ ಮಾಡುವ ಮೂಲಕ ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಇವರು 18 ವರ್ಷದಿಂದ ಒಂದೇ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಕ್ಕಳಿಗೆ ಹೊಡೆಯುವುದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಮುಖ್ಯ ಶಿಕ್ಷಕ, ಸಹ ಶಿಕ್ಷಕರಲ್ಲಿ ಕೆಲವರು ಈತನಿಗೆ ಬೆಂಬಲ ನೀಡುತ್ತಿದ್ದಾರೆ. ತಕ್ಷಣ ಈ ಶಿಕ್ಷಕನನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ವಿಎಚ್‌ಪಿ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ, ನಿವೃತ್ತ ಮುಖ್ಯ ಶಿಕ್ಷಕ ನಾರಾಯಣಮೂರ್ತಿ, ಕೆ.ವಿ.ಪ್ರವೀಣ್, ನವೀನ್, ಸುನೀಲ್, ರುದ್ರಪ್ಪ, ರಾಜೇಂದ್ರ ಪೈ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net