ಶೂ ಎಸೆತ ಪ್ರಕರಣ ಕ್ರಮಕ್ಕೆ ಆಗ್ರಹ

cji
ಸಿಜೆಐ ಬಿ.ಆರ್.ಗವಾಯಿ ಮೇಲೆ ಶೂ ಎಸೆಯುವ ಯತ್ನ ಮಾಡಿದ ವಕೀಲರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ಎಚ್.ಎನ್.ಶ್ರೀನಿವಾಸ್, ಶಿವಮೂರ್ತಿ, ಸಿ.ಮೂರ್ತಿ, ಹನುಮೇಶ್ ಮುಂತಾದವರು ಡಿಸಿಗೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆಯುವ ಯತ್ನ ಮಾಡಿದ ವಕೀಲರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಪ್ರಮುಖರು ಗುರುವಾರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ದೇಶದ ಪ್ರಜಾಪ್ರಭುತ್ವ, ಕಾನೂನು, ಸಂವಿಧಾನ ಹಾಗೂ ಸಮಸ್ತ ಜನತೆಗೆ ಈ ಘಟನೆ ಅವಮಾನ ಮಾಡುವಂತಾದ್ದಾಗಿದೆ. ಶೂ ಎಸೆಯುವ ಯತ್ನ ಮಾಡಿದ ವಕೀಲರ ಸದಸ್ಯತ್ವವನ್ನು ಭಾರತೀಯ ವಕೀಲರ ಪರಿಷತ್ ಶಾಶ್ವತವಾಗಿ ರದ್ದುಪಡಿಸಬೇಕು. ಸಂವಿಧಾನ ವಿರೋಧಿಸುವ ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ನ್ಯಾಯಮೂರ್ತಿಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ರಕ್ಷಣೆ ಒದಗಿಸಬೇಕು. ಮತ್ತೊಮ್ಮೆ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕಾನೂನು ರೂಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಎಚ್.ಎನ್.ಶ್ರೀನಿವಾಸ್, ಜಿಲ್ಲಾಧ್ಯಕ್ಷ ಸಿ.ಮೂರ್ತಿ, ಪದಾಧಿಕಾರಿಗಳಾದ ಶಿವಮೂರ್ತಿ, ದೇವೇಂದ್ರಪ್ಪ, ಗಾಜನೂರು ನಾಗರಾಜ್, ಹನುಮೇಶ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net