ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ಅಯೋದ್ಯೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ದೇವರ ಹೆಸರನ್ನು ಬಳಸಿಕೊಂಡು ರಾಮ ಮಂದಿರದ ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡುವ ಮೂಲಕ ಬಿಜೆಪಿ ಭಕ್ತರಿಗೆ ಮಹಾ ದ್ರೋಹ ಎಸಗಿದೆ. ಈ ಹಿನ್ನೆಲೆಯಲ್ಲಿ ಹಾಲಿ ಟ್ರಸ್ಟ್ ಅನ್ನು ತಕ್ಷಣವೇ ವಜಾಗೊಳಿಸಿ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರು ಹಾಗೂ ಶಂಕರಾಚಾರ್ಯ ಮಹಾಸ್ವಾಮೀಜಿಗಳನ್ನು ಒಳಗೊಂಡ ಹೊಸ ಟ್ರಸ್ಟ್ ರಚಿಸಬೇಕು ಮತ್ತು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದರು.

Published on
ಮಂಗಳೂರು: ದೇವರ ಹೆಸರನ್ನು ಬಳಸಿಕೊಂಡು ರಾಮ ಮಂದಿರದ ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡುವ ಮೂಲಕ ಬಿಜೆಪಿ ಭಕ್ತರಿಗೆ ಮಹಾ ದ್ರೋಹ ಎಸಗಿದೆ. ಈ ಹಿನ್ನೆಲೆಯಲ್ಲಿ ಹಾಲಿ ಟ್ರಸ್ಟ್ ಅನ್ನು ತಕ್ಷಣವೇ ವಜಾಗೊಳಿಸಿ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರು ಹಾಗೂ ಶಂಕರಾಚಾರ್ಯ ಮಹಾಸ್ವಾಮೀಜಿಗಳನ್ನು ಒಳಗೊಂಡ ಹೊಸ ಟ್ರಸ್ಟ್ ರಚಿಸಬೇಕು ಮತ್ತು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದರು.
ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರದಲ್ಲಿ ನಡೆದಿರುವ ಹಣ ಲೂಟಿ ಹಗರಣ ಭಕ್ತರ ಭಾವನೆಗಳಿಗೆ ಮಾಡಿದ ಅವಮಾನವಾಗಿದೆ. ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸಿಎಂ ರಚಿಸಿರುವ ಎಸ್‌ಐಟಿ ಮುಖ್ಯಸ್ಥರ ಮೇಲೆಯೇ 420 ವಂಚನೆ ಮೊಕದ್ದಮೆ ಇದೆ. ಅವರು ನೀಡಿರುವ ವರದಿಯಲ್ಲಿ ಕೇವಲ ಅಮಾಯಕರ ಹೆಸರನ್ನು ಸೇರಿಸಲಾಗಿದ್ದು, ವರದಿ ಸಲ್ಲಿಕೆಯಾದ ಮರುದಿನದಿಂದ ಹತ್ತು ಲಕ್ಷ ರೂ. ದೇಣಿಗೆ ಜಾಸ್ತಿಯಾಗಿದೆ. ರಾಜೀನಾಮೆ ನೀಡಿದವರು ಸೇರಿದಂತೆ ಮಂದಿರದ ಟ್ರಸ್ಟಿಗಳೆಲ್ಲರೂ ಈ ಬೃಹತ್ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. ಸಣ್ಣಪುಟ್ಟ ವಿಚಾರಗಳಿಗೂ ಮನ್ ಕಿ ಬಾತ್‌ನಲ್ಲಿ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು, ಇಷ್ಟೊಂದು ದೊಡ್ಡ ಹಗರಣ ನಡೆದಿದ್ದರೂ ಮೌನಕ್ಕೆ ಶರಣಾಗಿದ್ದಾರೆ. ಈ ಸಂದರ್ಭದಲ್ಲಿ ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳು ಸಂಪೂರ್ಣ ನಿಷ್ಕ್ರೀಯಗೊಂಡಂತೆ ಕಾಣುತ್ತಿವೆ ಎಂದರು.
ಕೆಪಿಸಿಸಿ ಪ್ರಚಾರ ಸಮಿತಿಯ ಸುಧೀರ್ ಕುಮಾರ್ ಮರೋಳಿ ಮಾತನಾಡಿ, ಪ್ರಧಾನಿ, ಯುಪಿ ಮುಖ್ಯಮಂತ್ರಿ ಹಾಗೂ ಆರ್‌ಎಸ್‌ಎಸ್ ಸೂಚನೆಯಂತೆಯೇ ಈ ಟ್ರಸ್ಟಿಗಳನ್ನು ನೇಮಿಸಲಾಗಿತ್ತು. ಹೀಗಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಬೆಂಬಲಿಗರೇ ಸೇರಿ ಮಂದಿರದ ಹಣವನ್ನು ಲೂಟಿ ಮಾಡಿದ್ದಾರೆ. ಸಣ್ಣಪುಟ್ಟ ತಪ್ಪುಗಳಿಗೂ ಆರೋಪಿಗಳ ಮನೆಗೆ ಬುಲ್ಡೋಜರ್ ನುಗ್ಗಿಸುತ್ತಿದ್ದ ಉತ್ತರ ಪ್ರದೇಶ ಸರ್ಕಾರ, ಈ ಮಹಾ ಹಗರಣದ ಆರೋಪಿಗಳ ವಿರುದ್ಧ ಯಾಕೆ ಬುಲ್ಡೋಜರ್ ಬಳಸುತ್ತಿಲ್ಲ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪ್ರಮುಖರಾದ ಮಹಮ್ಮದಾಲಿ, ಸದಾಶಿವ ಉಳ್ಳಾಲ, ಕೆ.ಪಿ.ಜಾನಿ, ಸುಭಾಶ್ಚಂದ್ರ ಶೆಟ್ಟಿ, ಸುಬೋದಯ ಆಳ್ವ, ಅಬ್ದುಲ್ ಆಲಿ, ಚೇತನ್ ಬೆಂಗ್ರೆ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net