ಕೆಪಿಟಿಸಿಎಲ್ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಆಗ್ರಹ

protest
ಕೆಪಿಟಿಸಿಎಲ್ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಸುವಂತೆ ಆಗ್ರಹಿಸಿ ವಿದ್ಯಾರ್ಥಿ ಒಕ್ಕೂಟದ ಪ್ರಮುಖರಾದ ಮಣಿಕಂಠ ನಾಯ್ಕ, ಶ್ರೀನಾಥ್, ಗೋಪಾಲ್ ಮುಂತಾದವರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಹಲವು ಇಲಾಖೆಗಳ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಸಲಾಗುತ್ತದೆ. ಈಗ ಕೆಪಿಟಿಸಿಎಲ್‌ನಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವಾಗಲೂ ಅದೇ ಮಾದರಿ ಅನುಸರಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಶುಕ್ರವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಪವರ್ ಮ್ಯಾನ್ ನೇಮಕಾತಿಗೆ ಸಂಬಂಧಿಸಿದಂತೆ 2,975 ಅಭ್ಯರ್ಥಿಗಳ ಆಯ್ಕೆಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಮತ್ತು ದೈಹಿಕ ಪರೀಕ್ಷೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅ. 21ರಿಂದ ಪ್ರಕ್ರಿಯೆ ಆರಂಭವಾಗಿದ್ದು ನ.20ರವರೆಗೆ ನಡೆಯಲಿದೆ.

ಆದರೆ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಸಿಕೊಡುವುದರಿಂದ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಇದರಿಂದ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಿದಂತಾಗುತ್ತದೆ. ಬೇರೆ ರಾಜ್ಯಗಳಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಇಲ್ಲಿಯೂ ಅದೇ ವ್ಯವಸ್ಥೆ ಅಳವಡಿಸಿಕೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ವಿದ್ಯಾರ್ಥಿ ಒಕ್ಕೂಟದ ಪ್ರಮುಖರಾದ ಮಣಿಕಂಠ ನಾಯ್ಕ, ಗೋಪಾಲ್, ಶ್ರೀನಾಥ್ ಮುಂತಾದವರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net