ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಆಗ್ರಹ

manavi
Published on

ನರಗುಂದ: ರೈತರು ರಾಷ್ಟ್ರೀಕೃತ ಹಾಗೂ ಸಹಕಾರಿ ಸಂಘಗಳಲ್ಲಿ ಪಡೆದ ಸಂಪೂರ್ಣ ಸಾಲಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತಸಂಘದ ಸದಸ್ಯರು ತಹಸೀಲ್ದಾರ್ ಶ್ರೀಶೈಲ ತಳವಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳಿಂದ ಬಹುತೇಕ ಬೆಳೆಗಳು ಹಾನಿಯಾಗಿವೆ. ಪರಿಣಾಮ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ಸಂಪೂರ್ಣ ಸಾಲಮನ್ನಾ ಮಾಡಬೇಕು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ತುಂಬಿರುವ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು. ನಿರಂತರ ಮಳೆಗೆ ಹಾನಿಗೀಡಾಗಿರುವ ತಾಲೂಕಿನ ರೈತರ ಬೆಳೆಗಳಿಗೆ ಗರಿಷ್ಠ ಮೊತ್ತದ ಬೆಳೆನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಾಬಳೆ, ತಾಲೂಕಾಧ್ಯಕ್ಷ ವಿಠಲ ಜಾಧವ, ವಿವಿಧ ಕನ್ನಡಪರ ಸಂಘಟಣೆಗಳ ಸದಸ್ಯ ಚನ್ನು ನಂದಿ, ಮೈಲಾರಪ್ಪ ಬಾರಕೇರ, ಮನೋಹರ ಹುಯಿಲಗೋಳ, ಎಸ್.ಎಸ್.ಪಾಟೀಲ, ರವಿ ಚಿಂತಾಲ, ನಭಿಸಾಬ ಕಿಲ್ಲೇದಾರ, ವಿವಿಧ ಗ್ರಾಮಗಳ ರೈತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net