

ಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ವೃತ್ತದಲ್ಲಿರುವ ಲಕ್ಷ್ಮೀವೆಂಕಟೇಶ ಸ್ವೀಟ್ ಹೌಸ್‌ನಿಂದ ಶಿವಪ್ಪ ನಾಯಕ ವೃತ್ತದವರೆಗೆ ಪೊಲೀಸರು ದ್ವಿಚಕ್ರ ವಾಹನ ನಿಲುಗಡೆ ನಿಷೇಧ ಮಾಡಿ ಬ್ಯಾರಿಕೇಡ್ ಅಳವಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಜನನಿಬಿಡ ಪ್ರದೇಶವಾದ್ದರಿಂದ ಜಿಲ್ಲಾಧಿಕಾರಿ ಆದೇಶದಂತೆ ಅಲ್ಲಿ ವಾಹನ ನಿಲುಗಡೆ ನಿಷೇಧವಿದೆ. ಆದ್ದರಿಂದ ಬ್ಯಾರಿಕೇಡ್ ಅಳವಡಿಸಿದ್ದೇವೆ ಎನ್ನುತ್ತಾರೆ ಪೊಲೀಸರು. ಕಳೆದ 30 ವರ್ಷಗಳಲ್ಲಿ ಈ ಭಾಗದಲ್ಲಿ ಇಲ್ಲದ ವಾಹನ ನಿಲುಗಡೆ ನಿಷೇಧ ಈಗೇಕೆ ಎಂಬುದು ಸಾರ್ವಜನಿಕರ ಪ್ರಶ್ನೆ.
ಈಗ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕರು ವಾಹನಗಳನ್ನು ಬ್ಯಾರಿಕೇಡ್ ಹೊರಗಡೆ ನಿಲ್ಲಿಸುತ್ತಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ಇನ್ನಷ್ಟು ಸಮಸ್ಯೆಯಾಗಿದೆ. ಆದ್ದರಿಂದ ಬ್ಯಾರಿಕೇಡ್ ತೆರವುಗೊಳಿಸಿ ಮೊದಲಿನಂತೆ ದ್ವಿಚಕ್ರವಾಹನ ನಿಲುಗಡೆ ಅವಕಾಶ ಕಲ್ಪಿಸಬೇಕು ಎಂಬುದು ನಾಗರಿಕರ ಒತ್ತಾಯ. ಶಾಸಕ ಎಸ್.ಎನ್.ಚನ್ನಬಸಪ್ಪ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅಧಿಕಾರಿಗಳೊಂದಿಗೆ ಈ ಬಗ್ಗೆ ದೂರವಾಣಿ ಮೂಲಕ ಮಾತನಾಡಿದರು. ಆದರೆ ಬ್ಯಾರಿಕೇಡ್‌ಗೆ ಇನ್ನೂ ಮುಕ್ತಿ ಸಿಕ್ಕಿಲ್ಲ.