ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹ

N-Ravikumar-MLA-Twitter-620x391
Published on

ಬೆಂಗಳೂರು: ಕೊಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ನೈತಿಕ ಹೊಣೆಹೊತ್ತು ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.
ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ದಿನನಿತ್ಯ ಅಲ್ಲಿ ಮಹಿಳೆಯರ ಮೇಲೆ, ಯುವಕರ ಮೇಲೆ ಹಲ್ಲೆ,ಕೊಲೆ, ಸುಲಿಗೆ, ಗುಂಡಾಗಿರಿ ನಡೆಯುತ್ತಿದ್ದರೂ ಅಲ್ಲಿನ ಸರ್ಕಾರ ಯಾರ ಮೇಲೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ಪ್ರಕರಣವನ್ನು ನಿಭಾಯಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಆದರೆ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುತ್ತಿರುವುದು ಹಾಸ್ಯಸ್ಪದ. ಹಾಗೂ ಈಗ ವೈದ್ಯ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕೆಂದು ಪಾದಯಾತ್ರೆ ಮಾಡುತ್ತಿರುವುದು ನಾಚಿಕೆಗೇಡು. ಮತ್ತು ಐಎನ್‌ಡಿಐಎ ಬ್ಲಾಕ್ ಈ ಪ್ರಕರಣದಲ್ಲಿ ಏಕೆ ಮೌನಕ್ಕೆ ಶರಣಾಗಿದೆ? ಎಂದು ಪ್ರಶ್ನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net