

ಶಿವಮೊಗ್ಗ: ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮತ್ತಿತರರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿಐಎಸ್‌ಎಲ್ ಕಾರ್ಖಾನೆ ಸಂಪೂರ್ಣ ಮುಚ್ಚುವ ಹಂತಕ್ಕೆ ಬಂದಿದೆ. ಲೋಕಸಭಾ ಸದಸ್ಯರು, ಜನಪ್ರತಿನಿಧಿಗಳು ಈ ಕಾರ್ಖಾನೆಯ ಅಭಿವೃದ್ಧಿಗೆ ಮುಂದಾಗಬೇಕು. ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಕಾರ್ಖಾನೆಯ ಪುನಶ್ಚೇತನದ ಭರವಸೆ ನೀಡಿದ್ದರು. ಆದರೆ ಅದು ಈಡೇರಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಖಾನೆ ಅಭಿವೃದ್ಧಿ ಬಗ್ಗೆ ಜನಪ್ರತಿನಿಧಿಗಳು ಪ್ರಧಾನಿ ಗಮನಸೆಳೆಯಬೇಕು. ಮೋದಿ ಮನ್ ಕೀ ಬಾತ್‌ನಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಬೇಕು. ವಿಐಎಸ್‌ಎಲ್ ಮತ್ತೆ ಸಮೃದ್ಧವಾಗಿ ಬೆಳೆಯುವಂತಾಗಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ದಿವ್ಯಶ್ರೀ, ಮಹಾದೇವಿ, ಇಂದ್ರಮ್ಮ, ಮಹಾಲಸ, ಕಣ್ಣಮ್ಮ ಮುಂತಾದವರಿದ್ದರು.