ಸಿಮ್ಸ್ ಸಹಾಯಕ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ಬಂಧನಕ್ಕೆ ಆಗ್ರಹ

lawyers gild association press meet
Published on

ಶಿವಮೊಗ್ಗ: ಸಿಮ್ಸ್ (ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ)ನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಸಹಾಯಕ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ಅವರನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲವಾದರೆ ಹೈಕೋರ್ಟ್‌ನಲ್ಲಿ ಸುಮೋಟೋ ಕೇಸ್ ದಾಖಲಿಸಲಾಗುವುದು ಎಂದು ಶಿವಮೊಗ್ಗ ಲಾಯರ್ಸ್‌ ಗೀಲ್ಡ್ ಮುಖ್ಯಸ್ಥ, ವಕೀಲ ಕೆ.ಪಿ.ಶ್ರೀಪಾಲ್ ಒತ್ತಾಯಿಸಿದರು.

ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಅಶ್ವಿನ್ ಹೆಬ್ಬಾರ್ ಲೈಂಗಿಕ ಕಿರುಕುಳದ ಪ್ರಕರಣ ಜಗಜ್ಜಾಹೀರವಾಗಿದ್ದು ಸೇವೆಯಿಂದ ಆತನನ್ನು ಅಮಾನತುಗೊಳಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂತ್ರಸ್ತೆ ದೂರು ನೀಡಿ ಐದು ದಿನ ಕಳೆದರೂ ಯಾವ ಕ್ರಮ ಕೈಗೊಂಡಿಲ್ಲ, ಪೊಲೀಸರು ಎಫ್‌ಐಆರ್ ಮಾಡಿದ್ದರೂ ಇದೂವರೆಗೆ ಆತನನ್ನು ಬಂಧಿಸಿಲ್ಲ. ಸಿಮ್ಸ್ ಆಡಳಿತ ಮಂಡಳಿ ಕೂಡ ಸಂತ್ರಸ್ತೆ ಪರವಾಗಿ ನಿಲ್ಲದೆ ಆರೋಪಿ ಪರವಾಗಿದೆ. ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಕೂಡಲೇ ಆರೋಪಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು. ವಕೀಲರಾದ ಷಹರಾಜ್ ಸಿದ್ದಿಕಿ, ಟಿ.ವಿಜಯ್ ಸುದ್ದಿಗೋಷ್ಠಿಯಲ್ಲಿದ್ದರು.

ಲೈಂಗಿಕ ಕಿರುಕುಳ ಸಂಬಂಧ ಸಂತ್ರಸ್ತೆ ದೂರನ್ನು ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಕಳುಹಿಸಲಾಗಿದೆ. ತನಿಖೆ ಮುಂದುವರಿದಿದ್ದು, ಸಂತ್ರಸ್ತೆ ಕಡೆಯವರು ಈಗಾಗಲೇ ಮಹಿಳಾ ಠಾಣೆಗೂ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಡಾ. ವಿರುಪಾಕ್ಷಪ್ಪ, ಸಿಮ್ಸ್ ನಿರ್ದೇಶಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net