ಸ್ವಾಮೀಜಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

up protest
ಯೋಗಿ ನರಸಿಂಗ ಆನಂದ ಸ್ವಾಮೀಜಿ ಬಂಧನಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು. ಸತ್ತಾರ್‌ಬೇಗ್, ಏಜಾಜ್ ಪಾಷ, ರಿಜ್ವಾನ್, ಮುನಾವರ್ ಪಾಷಾ ಇತರರಿದ್ದರು.
Published on

ಶಿವಮೊಗ್ಗ: ಉತ್ತರ ಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಯೋಗಿ ನರಸಿಂಗ ಆನಂದ ಸ್ವಾಮೀಜಿ ಸಾರ್ವಜನಿಕ ಸಭೆಯೊಂದರಲ್ಲಿ ಪ್ರವಾದಿ ಮಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮರ್ಕಜ್ಹಿ ಸುನ್ನಿ ಜಮೈತುಲ್ ಉಲ್ಮ ಕಮಿಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.

ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ. ಇದರಿಂದ ಸಮಾಜದ ಸಾಮರಸ್ಯಕ್ಕೂ ತೊಂದರೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದರು. ಯೋಗಿ ನರಸಿಂಗ ಆನಂದ ಸ್ವಾಮೀಜಿ ವಿರುದ್ಧ ಈಗಾಗಲೇ ಪ್ರತಿಭಟನೆಗಳು ನಡೆದಿವೆ. ಆದರೆ ಉತ್ತರ ಪ್ರದೇಶ ಸರ್ಕಾರ ಹಾಗೂ ಅಲ್ಲಿನ ಪೊಲೀಸ್ ಇಲಾಖೆ ಸ್ವಾಮೀಜಿ ಬೆಂಬಲಕ್ಕೆ ನಿಂತಿದೆ. ಸ್ವಾಮೀಜಿಯನ್ನು ಗೌಪ್ಯ ಸ್ಥಳದಲ್ಲಿ ಇರಿಸಲಾಗಿದೆ ಎಂದು ಆರೋಪಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಸತ್ತಾರ್‌ಬೇಗ್, ಮುನಾವರ್ ಪಾಷಾ, ಏಜಾಜ್ ಪಾಷ, ಅಶ್ರ್ ಅಹಮದ್, ನಯಾಜ್ ಅಹಮದ್ ಖಾನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net