ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

Published on

ಸರಗೂರು: ಮೈಸೂರು ವಿಭಾಗದ ನಾಯಕ ಸಮುದಾಯದ ಪ್ರಭಾವಿ ನಾಯಕ, ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯದ ಕಾಂಗ್ರೆಸ್ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರನ್ನು ಹಾದನೂರು ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯೆ ಭಾಗ್ಯಾ ಕೆಂಪಸಿದ್ದ ಒತ್ತಾಯಿಸಿದ್ದಾರೆ.

ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಸತತ ಎರಡನೇ ಬಾರಿ ಭರ್ಜರಿ ಜಯಗಳಿಸಿ ಜನಸಾಮಾನ್ಯರೊಡನೆ ಬೆರೆತು, ಕ್ಷೇತ್ರದ ಅಭಿವೃದ್ಧಿಗಾಗಿ 7 ವರ್ಷಗಳಿಂದ ಶ್ರಮಿಸಿ ಕ್ಷೇತ್ರದ ಮನೆ ಮಗನಾಗಿದ್ದಾರೆ. ತಾಲೂಕಿನ ಹಳ್ಳಿ-ಹಳ್ಳಿಗಳನ್ನೂ ಸುತ್ತಿ, ಕಾಡಂಚಿನ ಕಟ್ಟಕಡೆಯ ಗ್ರಾಮಗಳ ಜನರ ಕುಂದು-ಕೊರತೆ ಆಲಿಸಿ, ಅವುಗಳನ್ನು ವಿಧಾನಸಭೆ ಕಲಾಪಗಳಲ್ಲಿ ಪ್ರಸ್ತಾಪಿಸಿ, ಚರ್ಚಿಸಿ, ಸರ್ಕಾರದ ಗಮನಕ್ಕೆ ತಂದು ಸರ್ಕಾರದಿಂದ ಹೆಚ್ಚು ಅನುದಾನ ತಂದು ತಾಲೂಕಿನ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು, ಪ್ರತಿಯೊಂದು ಚುನಾವಣೆಯಲ್ಲೂ ಗೆಲುವು ಸಾಧಿಸಿ ಕೋಟೆಯನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆಯನ್ನಾಗಿ ರೂಪಿಸಿದ್ದಾರೆ. ಆದ್ದರಿಂದ ಹಿಂದುಳಿದ ತಾಲೂಕಾಗಿರುವ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕಾದರೆ ಅನಿಲ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net