ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ

manavi
ಅಶ್ಲೀಲ ವಿಡಿಯೋ ಹಗರಣದ ಸಮಗ್ರ ತನಿಖೆಗೆ ಆಗ್ರಹಿಸಿ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಪದಾಧಿಕಾರಿಗಳು ಶುಕ್ರವಾರ ಡಿಸಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು. ಜ್ಯೋತಿ ಅರಳಪ್ಪ, ಕೆ.ಎಸ್.ಶಶಿ, ಮುಕ್ತಿಯಾರ್ ಅಹಮದ್, ಗಾ.ರಾ.ಶ್ರೀನಿವಾಸ್, ಸ್ವಪ್ನಾ ಸಂತೋಷ್ ಇದ್ದರು.
Published on

ಶಿವಮೊಗ್ಗ: ಅಶ್ಲೀಲ ವಿಡಿಯೋ ಹಗರಣದಲ್ಲಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಮಾನವ ಹಕ್ಕುಗಳ ಆಯೋಗ, ಸಿಎಂ ಹಾಗೂ ಮುಖ್ಯ ಕಾರ್ಯದರ್ಶಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.

ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಆರೋಪಿಗಳನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು. ಪ್ರಕರಣದ ಸಂತ್ರಸ್ತೆಯರಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕು. ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ನ್ನು ಜನರಿಗೆ ಹಂಚಿದವರನ್ನೂ ಸಹ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು. ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಸೇರಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ಫೋರಂ ಅಧ್ಯಕ್ಷ ಜ್ಯೋತಿ ಅರಳಪ್ಪ, ಗೌರವಾಧ್ಯಕ್ಷ ಮುಕ್ತಿಯಾರ್ ಅಹ್ಮದ್, ಉಪಾಧ್ಯಕ್ಷ ಕೆ.ಎಸ್.ಶಶಿ, ಪ್ರಧಾನ ಕಾರ್ಯದರ್ಶಿ ಗಾ.ರಾ.ಶ್ರೀನಿವಾಸ್, ಸಹ ಕಾರ್ಯದರ್ಶಿ ಚಿರಂಜೀವಿ ಬಾಬು ಹಾಗೂ ನಿರ್ದೇಶಕರಾದ ಸ್ವಪ್ನಾ ಸಂತೋಷ್, ಮಮತಾ ಶಿವಣ್ಣ, ರುದ್ರೇಶ್ ಯಾದವ್, ಪರಮೇಶ್ವರ್, ಎಲ್.ಕೆ.ಚಂದ್ರಹಾಸ್ ಎನ್.ರಾಯ್ಕರ್, ಅನಿಲ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net