ಸೆ.15ಕ್ಕೆ ಪ್ರಜಾಪ್ರಭುತ್ವ ದಿನಾಚರಣೆ

12 nrp 5
ಎನ್.ಆರ್.ಪುರದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
Published on

ಎನ್.ಆರ್.ಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆ.15 ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಆಚರಿಸಲು ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಆಚರಿಸುವುದರಿಂದ ಎಲ್ಲ ವರ್ಗದ ಮುಖಂಡರು, ಸಂಘ ಸಂಸ್ಥೆಗಳು ಒಟ್ಟಾಗಿ ಸಂವಿಧಾನ ಪೀಠಿಕೆ ಓದಲು ಒಪ್ಪಿಗೆ ಸೂಚಿಸಲಾಯಿತು. ಎಲ್ಲ ಇಲಾಖೆ ಅಧಿಕಾರಿಗಳು, ಪಟ್ಟಣದ ವ್ಯಾಪ್ತಿಯ ಎಲ್ಲ ಶಾಲಾ, ಕಾಲೇಜಿನ ಮಕ್ಕಳು, ಸಂಘ ಸಂಸ್ಥೆಗಳು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೇರುವ ಮೂಲಕ ಸಂವಿಧಾನದ ಪೀಠಿಕೆ ಓದುವ ಮೂಲಕ ಅಂತರರಾಷ್ಟ್ರೀಯ ಸಂವಿಧಾನ ದಿನಾಚರಣೆ ಆಚರಿಸಲು ನಿರ್ಧರಿಸಲಾಯಿತು.
ತಾಲೂಕು ಮಟ್ಟದ ಸಲಹಾ ಸಮಿತಿ ರಚಿಸಿ ತಹಸೀಲ್ದಾರ್‌ನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಇಒ ಉಪಾಧ್ಯಕ್ಷರಾಗಿ, ಹಿಂದುಳಿದ ಕಲ್ಯಾಣ ಇಲಾಖೆ ಅಧಿಕಾರಿಗಳು , ಅಲ್ಪಸಂಖ್ಯಾತ ಇಲಾಖೆ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಎಸ್ಸಿ , ಎಸ್ಟಿ , ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವರ್ಗದಿಂದ ತಾಲೂಕು ಮಟ್ಟದ ಸಲಹಾ ಸಮಿತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಿರಂಜನ್ ಸಭೆಗೆ ಮಾಹಿತಿ ನೀಡಿದರು.
ಗ್ರೇಡ್ 2 ತಹಸೀಲ್ದಾರ್, ಹಿಂದುಳಿದ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಗುಬ್ಬಿಗಾ ಗ್ರಾಪಂ ಸದಸ್ಯ ಸಾಜು, ಜಾಮಿಯಾ ಮಸೀದಿಯ ಸೈಯದ್ ಸಾಧಿಕ್ ಭಾಷಾ, ದಲಿತ ಸಂಘಟನೆ ಮುಖಂಡರಾದ ಎಚ್.ಎಂ.ಶಿವಣ್ಣ, ರಾಮು, ರಾಜೇಶ್, ಶ್ರೀನಿವಾಸ್, ಹರೀಶ್, ಮಂಜುನಾಥ್, ಮನು, ಸುಬ್ರಹ್ಮಣ್ಯ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net