

ಶಿವಮೊಗ್ಗ: ಡೆಂಘೆ ನಿಯಂತ್ರಣಕ್ಕೆ ಸಂಬಂಧಿಸಿ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು ಮತ್ತು ಸಾರ್ವಜನಿಕರು ಸರ್ಕಾರಿ ಇಲಾಖೆ ಅಧಿಕಾರಿಗಳಿಗೆ ಸ್ಪಂದಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಜೆಪಿನಗರ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಡೆಂಘೆ ನಿಯಂತ್ರಣ ಸಂಬಂಧ ಏರ್ಪಡಿಸಿದ್ದ ಡ್ರೈ ಡೇ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಸವನ್ನು ಎಲ್ಲಿ ಬೇಕಾದಲ್ಲಿ ಹಾಕದೇ ಪಾಲಿಕೆ ಕಸದ ವಾಹನದಲ್ಲಿ ಹಾಕಬೇಕು. ಬೀದಿ, ಮನೆ ಸುತ್ತಮುತ್ತ ಪ್ರದೇಶದಲ್ಲಿ ನೀರು ಸಂಗ್ರಹಣೆ ಆಗದಂತೆ ನೋಡಿಕೊಳ್ಳಬೇಕು. ಡೆಂಘೆ ವಿರುದ್ಧ ಪ್ರತಿಯೊಬ್ಬರು ಹೋರಾಟ ಮಾಡಬೇಕಿದೆ ಎಂದು ತಿಳಿಸಿದರು.
ಅಧಿಕಾರಿಗಳೊಂದಿಗೆ ನಗರದದ ಅನೇಕ ಮನೆಗಳಿಗೆ ಭೇಟಿ ನೀಡಿ ಲಾರ್ವಾ ಉತ್ಪತ್ತಿಯಾಗಿರುವ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕರಿಗೆ ಇದರ ಬಗ್ಗೆ ಮಾಹಿತಿ ನೀಡಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಹಾಗೂ ಲಾರ್ವಾ ಉತ್ಪತಿಯಾಗದಂತೆ ಗಮನ ನೀಡಬೇಕು ಎಂದರು.
ಡಿಎಚ್‌ಒ ಡಾ. ನಟರಾಜ್, ರೋಗವಾಕ ಆಶ್ರೀತ ಅಧಿಕಾರಿ ಡಾ. ಗುಡದಪ್ಪ ಕಸಬಿ, ತಾಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್, ಡಾ. ಮೋಹನ್, ಡಾ. ಭೀಮಪ್ಪ, ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ವಿಕಾಸ್, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕತೆರ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.