

ನವದೆಹಲಿ: ಬಾಲಿವುಡ್ ನಟಿ ಸೋನಂ ಕಪೂರ್ ಮನೆಯಲ್ಲಿ ಚಿನ್ನಾಭರಣ ಕದ್ದು ಸಿಕ್ಕಿಬಿದ್ದ ಕಳ್ಳರಿಗೆ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಆರೋಪಿ ದೇವ್ ವರ್ಮಾಗೆ (40) ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿಲ್ಲ. ದೆಹಲಿಯ ನಿವಾಸದಲ್ಲಿ ಮನೆಗೆಲಸ ಮಾಡುತ್ತಿದ್ದ ಆರೋಪಿ ಇತ್ತೀಚೆಗೆ ಸಿಕ್ಕಿಬಿದ್ದಿದ್ದ.
ಫೆಬ್ರವರಿಯಲ್ಲಿ 1 ಕೋಟಿ ಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಬಗ್ಗೆ ನಟಿ ಸೋನಂ ಕಪೂರ್ ಹಾಗೂ ಪತಿ ಆನಂದ್ ಅಹುಜಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.100 ಡೈಮಂಡ್, ಚಿನ್ನ ಹಾಗೂ ವಜ್ರದ ಬಳೆಗಳು ಸೇರಿದಂತೆ 1 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು.