ಬಿ.ಇಡಿ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದ ಶಿಕ್ಷಣ ಇಲಾಖೆ

B.Ed Students Logo
Published on

ಬೆಂಗಳೂರು ಶಾಲಾ ಶಿಕ್ಷಣ ಇಲಾಕೆಯು 2024-25ನೇ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ದಾಖಲಾತಿಗಾಗಿ ಆನ್‌ಲೈನ್ ಮೂಲಕ ನ.14ರವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ವೆಬ್‌ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ದಾಖಲಾತಿ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಸೇರಿ ಎಲ್ಲ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ.

ಅಭ್ಯರ್ಥಿಗಳು ಅಧಿಸೂಚನೆನ್ನು ಓದಿ ಅರ್ಥೈಸಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net