

ಮೂಡಿಗೆರೆ: ಸಂವಿಧಾನದ ಬಗ್ಗೆ ಪ್ರತಿಯೊಬ್ಬ ಭಾರತೀಯರು ತಿಳಿದುಕೊಳ್ಳಬೇಕೆಂದು ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
ಅವರು ಬುಧವಾರ ಪಟ್ಟಣದ ಬಸ್ ನಿಲ್ದಾಣದ ಲಯನ್ಸ್ ವೃತ್ತದಲ್ಲಿ ಸಂವಿಧಾನ ಜಾಗೃತಿ ರಥಯಾತ್ರೆ ಸ್ವಾಗತಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಭಾರತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಶ್ರೇಷ್ಠವಾಗಿದೆ. ಅದನ್ನು ಆಚರಣೆಗೆ ಸೀಮಿತಗೊಳಿಸದೆ ಪ್ರತಿ ಹಂತದಲ್ಲೂ ಗೌರವಿಸಬೇಕೆಂದು ಹೇಳಿದರು.
ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ಕೇವಲ ಅಂಬೇಡ್ಕರ್ ಜಯಂತಿ, ಸಂವಿಧಾನ ದಿನಾಚರಣೆ ಮಾಡುವುದರಿಂದ ಎಲ್ಲರಿಗೂ ಸಂವಿಧಾನದ ಬಗ್ಗೆ ಜಾಗೃತಿ ಮೂಡುವುದಿಲ್ಲ. ಗ್ರಾಪಂ ಮಟ್ಟದಲ್ಲಿ ಹಳ್ಳಿಹಳ್ಳಿಗಳಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರದ ಕಾರ್ಯ ಉತ್ತಮವಾಗಿದೆ ಎಂದು ಹೇಳಿದರು. ಪ್ರಮುಖರಾದ ಎಂ.ಎಸ್.ಅನಂತ್, ದೀಪಕ್ ದೊಡ್ಡಯ್ಯ, ಎಚ್.ಪಿ.ರಮೇಶ್, ಹಂಜಾ, ಯು.ಬಿ.ಮಂಜಯ್ಯ, ಲೋಕವಳ್ಳಿ ರಮೇಶ್ ಮತ್ತಿತರರಿದ್ದರು.