ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್; ದೂರು ದಾಖಲಿಸಿದ ಶ್ರೀನಿವಾಸ್

priyank kharge
Published on

ಬೆಂಗಳೂರು: ಐಟಿ/ಬಿಟಿ ಸಚಿವ(IT/BT Minister) ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್(Derogatory post) ಮಾಡಿದ್ದು, ಇದನ್ನು ಕಾಂಗ್ರೆಸ್ ಮಾಧ್ಯಮ ವಕ್ತಾರ ತೀವ್ರವಾಗಿ ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಅವರ ಫೋಟೋವನ್ನು ಎಡಿಟ್ ಮಾಡಿ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕಾಂಗ್ರೆಸ್ ಮಾಧ್ಯಮ ವಕ್ತಾರ ಶ್ರೀನಿವಾಸ್ ದೂರು ದಾಖಲಿಸಿದ್ದು, ಶೀಘ್ರವೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೈಬರ್ ಕ್ರೈಂ(Cyber Crime) ಪೊಲೀಸರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿರುವ ಶ್ರೀನಿವಾಸ್, "ಪ್ರಿಯಾಂಕ್ ಖರ್ಗೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ಪ್ರಿಯಾಂಕ್ ಅವರ ಫೋಟೋ ಎಡಿಟ್ ಮಾಡಿ, ಪೋಸ್ಟ್ ಮಾಡಿರೋ ಕಿಡಿಗೇಡಿಗಳಿಗೆ ಶಿಕ್ಷೆಯಾಗಬೇಕು" ಎಂದು ಹೇಳಿದ್ದಾರೆ.

"ಇದರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರ ಘನತೆಗೆ ದಕ್ಕೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೂ, ಕರ್ನಾಟಕದ ಜನತೆಗೂ ಮತ್ತು ಕರ್ನಾಟಕ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು" ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net