

ಬೆಂಗಳೂರು: ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಮುಖಂಡ ಎಸ್. ಮನೋಹರ್, ಈ ಕುರಿತು ಹೈಗ್ರೌಂಡ್ಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲೆಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಹುಲ್ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವೈಯಕ್ತಿವಾಗಿ ತೇಜೋವಧೆ ಮಾಡಿದ್ದು, ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನೋಹರ್ ಮನವಿ ಮಾಡಿದ್ದರು. ಇದರ ಮೇರೆಗೆ ಬಸನಗೌಡ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.