ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ ; ಶಾಲಾ ಮಕ್ಕಳಿಗೆ ಇನ್ನು ಚಿಕ್ಕಿ ಇಲ್ಲ|Harmful to Health

vidhanasoudha
Published on

ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಿ(Detection of elements harmful to health; No more chicks for school children) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ್ಯಾಟ್) ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದೇ ಇದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ವಿತರಣೆ ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲು ಸೂಚಿಸಲಾಗಿದೆ. ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ಹಾಗೂ ಧಾರವಾಡ ಅಪರ ಆಯುಕ್ತರು ಕೋರಿರುವ ಹಿನ್ನೆಲೆಯಲ್ಲಿ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net