ಬಿಡುಗಡೆಗೂ ಮುನ್ನವೇ ಭಾರೀ ಮೊತ್ತಕ್ಕೆ ಸೇಲಾಯ್ತು 'ದೇವರ' ಒಟಿಟಿ ಹಕ್ಕು?

Untitled design - 2023-09-29T154242.871
Published on

ಆಂಧ್ರಪ್ರದೇಶ: ತೆಲುಗು ಚಿತ್ರರಂಗದ ಸ್ಟಾರ್ ನಟ ಜೂ. ಎನ್​ಟಿಆರ್​ ಅಭಿನಯದ ಬಹುನಿರೀಕ್ಷಿತ 'ದೇವರ' ಬಗ್ಗೆ ಸದ್ಯ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಸಿನಿಮಾ ಕುರಿತಾದ ಹೊಸ ಹೊಸ ಮಾಹಿತಿಗಾಗಿ ಕುತೂಹಲದಿಂದ ಕಾಯುತ್ತಿರುವ ನಟನ​ ಅಭಿಮಾನಿಗಳಿಗೆ ಇದೀಗ ಆಶ್ಚರ್ಯಕರ ಸುದ್ದಿಯೊಂದು ಹೊರಬಿದ್ದಿದೆ.

ಶಿವ ಕೊರಟಾಲ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ 'ದೇವರ' ಬಿಡುಗಡೆಗೂ ಮುನ್ನವೇ ಭಾರತೀಯ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಮತ್ತು ಆಡಿಯೋ ಹಕ್ಕುಗಳು ಭರ್ಜರಿ ಮೊತ್ತಕ್ಕೆ ಮಾರಾಟವಾಗುವ ಮುಖೇನ ಹೊಸ ದಾಖಲೆ ಬರೆದಿದೆ ಎಂದು ಇತ್ತೀಚಿನ ವರದಿಯೊಂದು ತಿಳಿಸಿದೆ.

ಚಿತ್ರದ ಡಿಜಿಟಲ್​ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ​ಪಡೆದುಕೊಂಡಿದ್ದು, ಸಂಗೀತ ಹಕ್ಕುಗಳನ್ನು ಟಿ-ಸೀರೀಸ್ ಪಾಲಾಗಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಈ ಕುರಿತು ಚಿತ್ರದ ನಿರ್ಮಾಪಕರು ಘೋಷಿಸಲಿರುವ ಅಧಿಕೃತ ಮಾಹಿತಿಗಾಗಿ ಕಾಯಬೇಕಿದೆ.

ಚಿತ್ರದಲ್ಲಿ ಜೂ. ಎನ್​ಟಿಆರ್​ ಮತ್ತು ಬಾಲಿವುಡ್​ ನಟಿ ಜಾನ್ವಿ ಕಪೂರ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವು ಏಪ್ರಿಲ್ 5, 2024 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲು ಸಿದ್ಧವಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net