ಅರಸು ಜನ್ಮದಿನಾಚರಣೆ ನಾಳೆ

web
Published on

ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ೧೦೮ನೇ ಜನ್ಮದಿಚಾರಣೆಯನ್ನು ಆ. ೨೦ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಕರ್ನಾಟಕ ಕುಲ ಪುರೋಹಿತ ಆಲೂರು ವೆಂಕಟರಾವ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಕಾರ್ಮಿಕ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮತ್ತು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಜನಪ್ರತಿನಿಽಗಳು, ಅಽಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net