ದೇವರಾಜ ಅರಸ್​ ಟರ್ಮಿನಲ್ ಹಗರಣ: ಡಿ.ಎಸ್.ವೀರಯ್ಯಗೆ ಜುಲೈ 30ರವರೆಗೆ ನ್ಯಾಯಾಂಗ ಸೆರೆ

V
Published on

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಅವರಿಗೆ ಜುಲೈ 30ರವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

47 ಕೋಟಿ ರೂ. ಹಗರಣ ಆರೋಪದಲ್ಲಿ ಬಂಧನವಾಗಿದ್ದ ವೀರಯ್ಯರನ್ನು ಸಿಐಡಿ ಅಧಿಕಾರಿಗಳು ನಗರದ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ನ್ಯಾಯಾಧೀಶರು, ವೀರಯ್ಯರನ್ನು ನ್ಯಾಯಾಂಗ ಬಂಧನ‌ಕ್ಕೆ ಒಪ್ಪಿಸಲು ಆದೇಶ ನೀಡಿದ್ದಾರೆ. ಮತ್ತೊಂದೆಡೆ ವೀರಯ್ಯ ಪರ ವಕೀಲ ವಕೀಲ ಶ್ಯಾಮಸುಂದರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್‌ ಠಾಣೆಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌.ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆ ಸರ್ಕಾರ ವಹಿಸಿತ್ತು. ಅಂತೆಯೇ ತನಿಖೆಗಿಳಿದ ಸಿಐಡಿ ಅಧಿಕಾರಿಗಳು, ಜುಲೈ 12 ರಂದು ಮಾಜಿ ಶಾಸಕ ವೀರಯ್ಯ ಅವರನ್ನು ಬಂಧಿಸಿದ್ದರು.

2021ರಿಂದ 2023ರ ನಡುವೆ ಡಿ.ಎಸ್.ವೀರಯ್ಯ ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದಾಗ 47.10 ಕೋಟಿ ರೂಪಾಯಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿಎನ್​ ಶಿವಪ್ರಸಾದ್ ವಿಲ್ಸನ್​​ ಗಾರ್ಡ್​ನ್​ ಠಾಣೆಗೆ ದೂರು ನೀಡಿದ್ದರು. ತುಂಡು ಗುತ್ತಿದೆ ಆಧಾರದಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ 2023 ಸೆಪ್ಟೆಂಬರ್​ 23ರಂದು ಎಫ್​ಐಆರ್ ದಾಖಲಾಗಿತ್ತು. ಡಿ.ಎಸ್. ವೀರಯ್ಯ ಅವರು ನಿಗಮದ ಮಾಜಿ ಅಧ್ಯಕ್ಷರಾಗಿದ್ದರು.

ನಿಗಮದ ಅಂದಿನ ಅಧ್ಯಕ್ಷರಾಗಿದ್ದ ವೀರಯ್ಯ ವಿರುದ್ಧ ವಿಲ್ಸನ್​ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬಾರತೀಯ ದಂಡ ಸಂಹಿತೆ 1860(ಐಸಿಸಿ) ಕಲಂ 120ಬಿ, 409, 420, 465, 468 ಮತ್ತು 471ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಬಳಿಕ ವೀರಯ್ಯ ಅವರು ಕ್ರಿಮಿನಲ್ ಮಿಸಲೇನಿಯಸ್ ಅರ್ಜಿಯನ್ನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​, ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net