ವಕೀಲ ದೇವರಾಜೇಗೌಡರ ಬಂಧನ; ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆಶಿ

dcm dk
Published on

ಬೆಂಗಳೂರು:
ಲೈಂಗಿಕ ದೌರ್ಜನ್ಯದಡಿ ವಕೀಲ ದೇವರಾಜೇಗೌಡ ಅವರನ್ನು ಬಂಧನ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ.
ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇವರಾಜೇಗೌಡರ ಬಂಧನವಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ರಾತ್ರಿ ನಾನು ಮನೆಗೆ ಬಂದಾಗ ತಡವಾಗಿತ್ತು. ಬೆಳಿಗ್ಗೆ ಚುನಾವಣಾ ಪ್ರಚಾರಕ್ಕಾಗಿ ಹೊರಟಿದ್ದೇನೆ. ಹಾಗಾಗಿ ಯಾವ ಪತ್ರಿಕೆಯನ್ನು ಓದಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಆಂಧ್ರ ಪ್ರದೇಶದ ಮಡಕಶಿರ ಮತ್ತು ಕಡಪ ಕಡೆಗೆ ಪ್ರಚಾರಕ್ಕೆ ಹೋಗುತ್ತಿದ್ದೇನೆ. ಅಲ್ಲಿಂದ ಬಂದ ಮೇಲೆ ಮಾತನಾಡುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net