ಆರೋಗ್ಯದ ಸ್ಥಿತಿ ಆಧರಿಸಿ ಅಯೋಧ್ಯೆಗೆ ದೇವೇಗೌಡರ ಭೇಟಿ

Devegouda
Published on

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಹೋಗುವ ಬಗ್ಗೆ ದೇವೇಗೌಡರ ಆರೋಗ್ಯದ ಪರಿಸ್ಥಿತಿಗಳ ಆಧಾರದ ಮೇಲೆ ನಿರ್ಧರಿಸುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರು ಅಯೋಧ್ಯೆಗೆ ಹೋಗುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಗೌಡರ ಆರೋಗ್ಯದ ಪರಿಸ್ಥಿತಿ ಆಧಾರದ ಮೇಲೆ ಹೋಗುವ ಬಗ್ಗೆ ಮುಂದೆ ನಿರ್ಧಾರ ಮಾಡುತ್ತೇವೆ. ದೇವೇಗೌಡರು ಪ್ರಯಾಣ ಮಾಡುವುದಕ್ಕೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಸಲಹೆ ಏನಿದೆ, ಅದರ ಮೇಲೆ ಹೋಗಬೇಕೆ? ಬೇಡವೆ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net