ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ; ಪ್ರಧಾನಿ ಮೋದಿ, ಸಿಎಂ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶುಭಾಶಯ

HDD Modi
Published on

ಬೆಂಗಳೂರು:
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 92ನೇ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು.
ಜೆ.ಪಿ.ನಗರದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಗೌಡರು ಪಾಲ್ಗೊಂಡಿದ್ದರು. ಅವರ ಜೊತೆಗೆ ಬಾಲಕೃಷ್ಣೇಗೌಡರು ಇದ್ದರು.
ದೇವೇಗೌಡರ ಹುಟ್ಟು ಹಬ್ಬವನ್ನು ಜೆಡಿಎಸ್ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ನಾನಾ ಕಡೆಯಲ್ಲಿ ಸರಳವಾಗಿ ಆಚರಣೆ ಮಾಡಿದರು.
ಜೆಡಿಎಸ್ ಕಾರ್ಯಕರ್ತರುಗಳು ದೇವೇಗೌಡರ ಹೆಸರಿನಲ್ಲಿ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ನಡೆಸಿದರೆ, ಇನ್ನು ಹಲವೆಡೆ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿದರು.
ಜೆಡಿಎಸ್ ಕಚೇರಿಯಲ್ಲಿ ದೇವೇಗೌಡರ ಕಟೌಟ್‌ಗೆ ಹಾಲಿನ ಅಭಿಷೇಕವನ್ನು ನೆರವೇರಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಎಚ್.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಷ್ಟ್ರಕ್ಕೆ ನೀಡಿದ ಕೊಡುಗೆಗಾಗಿ ರಾಜಕೀಯ ವಲಯದಲ್ಲಿ ಅವರು ಸಾಕಷ್ಟು ಗೌರವಕ್ಕೆ ಪಾತ್ರರಾಗಿದ್ದಾರೆ. ರಾಜಕೀಯ ವಲಯದಲ್ಲೇ ಅತ್ಯಂತ ಗೌರವಯುತ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಕೃಷಿ ಗ್ರಾಮೀಣ ವಲಯಕ್ಕೆ ಅವರ ಕೊಡುಗೆ ಅಪಾರ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಒಲವು ಗಮನಾರ್ಹವಾಗಿದೆ. ತಮ್ಮ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದೇವೇಗೌಡರ ಜೊತೆಗಿನ ಹಳೆ ಪೋಟೋ ಹಾಕಿ ಟ್ವೀಟ್ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
ತಮಗೆ ಇನ್ನಷ್ಟು ಕಾಲ ಆಯಸ್ಸು ಸಿಗಲಿ. ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿರುವ ಅವರು, ತಮ್ಮ ಅನುಭವ ಮತ್ತು ಮಾರ್ಗದರ್ಶನ ಮುಂದೆಯೂ ನಾಡಿಗೆ ದೊರಕಲಿ ಎಂದು ಆಶಿಸಿದ್ದಾರೆ.

ಬಿಎಸ್‌ಯಡಿಯೂರಪ್ಪ
ಹಿರಿಯ ಮುತ್ಸದ್ದಿ ನಾಯಕರು ಮತ್ತು ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶುಭಾಷಯಗಳನ್ನು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಮತ್ತು ಹಿತೈಷಿಗಳು ಶುಭ ಹಾರೈಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net