ಚನ್ನಪಟ್ಟಣದಲ್ಲಿ ವಾಸ್ತವ್ಯ, NDA ಅಭ್ಯರ್ಥಿ ನಿಖಿಲ್ ಪರ ಪ್ರಚಾರ ಮಾಡಲು ದೇವೇಗೌಡರು ಸಿದ್ಧ!

hd devegowda
Published on

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣಾ ರಂಗೇರಿದ ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್​ ಕಣಕ್ಕಿಳಿದರೆ, ಬಿಜೆಪಿ-ಜೆಡಿಎಸ್​ ಮೈತ್ರಿ (NDA) ಅಭ್ಯರ್ಥಿಯಾಗಿ ಚನ್ನಪಟ್ಟಣಕ್ಕೆ ಯಾರು ನಿಲ್ಲುತ್ತಾರೆ ಎಂಬ ಗೊಂದಲಗಳು ಪಕ್ಷದಲ್ಲಿ ಮೂಡಿತ್ತು. ಇದೀಗ ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು, ಅಧಿಕೃತವಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಎನ್​ಡಿಎ ಘೋಷಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಿಎಸ್​.ವೈ. ಯಡಿಯೂರಪ್ಪ ಮಾತನಾಡಿದ್ದಾರೆ.

ನಿಖಿಲ್ ಗೆಲ್ಲುವುದು ನಮಗೆ ನೂರಕ್ಕೆ ನೂರರಷ್ಟು

ಸರಣಿ ಸಭೆಗಳನ್ನು ನಡೆಸಿದ ಬಳಿಕ ಚನ್ನಪಟ್ಟಣಕ್ಕೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಅಧಿಕೃತವಾಗಿ ಘೋಷಿಸಿದ ಎನ್​ಡಿಎ, ನಾಳೆ ನಿಖಿಲ್ ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದೆ. ಈ ವೇಳೆ ಮಾತನಾಡಿದ ಬಿಎಸ್​ವೈ, ನಿಖಿಲ್ ಗೆಲ್ಲುವುದು ನಮಗೆ ನೂರಕ್ಕೆ ನೂರರಷ್ಟು ನಮಗೆ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇನ್ನು ಮೊಮ್ಮಗನ ಪರ ಪ್ರಚಾರ ಮಾಡಲು ಚನ್ನಪಟ್ಟಣದಲ್ಲಿ ವಾಸ್ತವ್ಯ ಹೂಡಲು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠರಾದ ಎಚ್​.ಡಿ. ದೇವೇಗೌಡರು ತಿಳಿಸಿದ್ದಾರೆ.

ಕಾರ್ಯಕರ್ತರ ಒತ್ತಾಯದ ಮೇರೆಗೆ‌

ಚನ್ನಪಟ್ಟಣದಲ್ಲಿ ವಾಸ್ತವ್ಯ ಹೂಡಿ. ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದಾಗಿ ದೇವೇಗೌಡರು ಘೋಷಿಸಿದ್ದಾರೆ. ಕಾರ್ಯಕರ್ತರ ಒತ್ತಾಯದ ಮೇರೆಗೆ‌ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಜೆಡಿಎಸ್​ ಕಾರ್ಯಕರ್ತರು ಫುಲ್​ ಖುಷ್​ ಆಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net