

ಹೊಸನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಗೆಲುವು ಖಚಿತವಾಗುತ್ತಿದ್ದಂತೆ ಒಂದೆಡೆ ಸೇರಿದ ಕಾರ್ಯಕರ್ತರು ಸೇರಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಜಿಲ್ಲೆಯ ಅಭಿವೃದ್ಧಿಗೆ ಮತ್ತೆ ಸಹಕಾರ ಸಿಕ್ಕಿದೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಇದು ಜನರು ನೀಡಿದ ಗೆಲುವು ಎಂದು ಬಣ್ಣಿಸಿದರು. ಪ್ರಧಾನಿ ಮೋದಿ ಸಂಸದ ರಾಘವೇಂದ್ರ ಪರವಾಗಿ ಘೋಷಣೆ ಕೂಗಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ, ಎನ್.ಆರ್.ದೇವಾನಂದ್, ಜಿಪಂ ಮಾಜಿ ಸದಸ್ಯ ಸುರೇಶ ಸ್ವಾಮಿರಾವ್, ಪಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್, ಪ್ರಮುಖರಾದ ನಿತಿನ್ ನಗರ, ಸತೀಶ್, ತಾಲೂಕು ಬಿಜೆಪಿ ಪದಾಧಿಕಾರಿಗಳು, ಯುವ ಮೋರ್ಚಾ ಕಾರ್ಯಕರ್ತರು ಪಾಲ್ಗೊಂಡಿದ್ದರು.