ಪತ್ರಕರ್ತ ಭೀಮಣ್ಣ ಗಜಾಪುರ ಸ್ವಸಾಮಥ್ಯ೯ದಿಂದ ವೃತ್ತಿಯಲ್ಲಿ ಗುರುತಿಸಿಕೊಂಡವರು ಎಂದರು. ಕೃತಿಯ ಕರ್ತೃ ಭೀಮಣ್ಣ ಗಜಾಪುರ ಮಾತನಾಡಿ, ತಾನು ಶಿಕ್ಷಕ ವೃತ್ತಿಯನ್ನು ತ್ಯಜಿಸಿ, ಸಮಾಜದ ವ್ಯವಸ್ಥೆಗೆ ಪೂರಕವಾಗಿರುವ ಪತ್ರಿಕೋದ್ಯಮ ವೃತ್ತಿ ಆಯ್ಕೆ ಮಾಡಿಕೊಂಡಿರುವ ಕಾರಣ ಬಹಳಷ್ಟು ಅನುಭವ ಪಾಠವನ್ನು ಕಲಿಯುವಂತಾದೆ ಎಂದರು. ಇದೇ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನೂ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಕೆ.ಯೂ.ಡಬ್ಲ್ಯೂ.ಜೆ ಕಾರ್ಯದರ್ಶಿ ಮತ್ತೀಕೆರೆ ಜಯರಾಮ, ರಾಜ್ಯ ಕಾರ್ಯದರ್ಶಿ ಸೋಮಶೇಖರ ಕೆರೆಗೋಡು ಸ್ವಾಗತಿಸಿ, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ವೇದಿಕೆಯಲ್ಲಿದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಸ್. ಸೋಮಶೇಖರ ಗಾಂಧಿ, ಆರ್. ದೇವರಾಜ್, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಸತ್ಯನಾರಾಯಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಉಪಾಧ್ಯಕ್ಷರಾದ ಎನ್. ಶ್ರೀನಾಥ್, ಕೆ.ಎಂ. ಜಿಕ್ರಿಯಾ, ಕಾರ್ಯದರ್ಶಿ ಬಸವರಾಜು, ಸಮಿತಿ ಸದಸ್ಯ ಎ.ಬಿ. ಶಿವರಾಜು ಸೇರಿದಂತೆ ಹಲವು ಸದಸ್ಯರು, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್ ಮತ್ತು ಕೂಡ್ಲಿಗಿ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಭಾಗವಹಿಸಿದ್ದರು. ಪತ್ರಕರ್ತ ಹುಡೇಂ ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಣೆ ಮಾಡಿದರು.