ವೃತ್ತಿ ಕೌಶಲದಿಂದ ಕಲಿಕಾ ಮನೋಭಾವ ವೃದ್ಧಿ

mlr dc
ಮಾಲೂರಿನ ಕುಂಬಾರಪೇಟೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ವಿಕ್ ಫೌಂಡೇಷನ್‌ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದರು. ತಹಸೀಲ್ದಾರ್ ಕೆ.ರಮೇಶ್, ಗ್ರೇಡ್-2 ತಹಸೀಲ್ದಾರ್ ಹರಿಪ್ರಸಾದ್, ಬಿಇಒ ಎಚ್. ಎಸ್. ಚಂದ್ರಕಲಾ ಇದ್ದರು.
Published on

ಕೋಲಾರ/ಮಾಲೂರು
ಶಿಕ್ಷಕರು ಮಕ್ಕಳಿಗೆ ಕಲಿಸುವ ಬೋಧನಾ ವಿಧಾನಗಳಲ್ಲಿ ವೃತ್ತಿ ಕೌಶಲವನ್ನು ಹೆಚ್ಚಿಸಿಕೊಂಡು ಕಲಿಕೆಯ ಮನೋಭಾವ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದರು.

ಪಟ್ಟಣದ ಕುಂಬಾರ ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಅದ್ವಿಕ್ ಫೌಂಡೇಷನ್ನಿಂದ ನೀಡಿದ್ದ ನೋಟ್ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ವಿದ್ಯಾರ್ಥಿ ಹಂತದಲ್ಲಿ ತಪಸ್ಸಿನ ರೀತಿ ಉಪಾಸನೆ ಮಾಡಿ ಉನ್ನತ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಉತ್ತಮ ಶಿಕ್ಷಣ ಪಡೆದು ದೇಶಕ್ಕೆ ಮತ್ತು ಪಾಲಕರಿಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ಶಿಕ್ಷಕ ವೃತ್ತಿ ಅತ್ಯಅಮೂಲ್ಯವಾದದ್ದು. ಶಿಕ್ಷಕರು ಮಕ್ಕಳಿಗೆ ಕಲಿಸುವ ಬೋಧನಾ ವಿಧಾನಗಳನ್ನು ವೃತ್ತಿ ಕೌಶಲ ಹೆಚ್ಚಿಸಿಕೊಂಡು ಮಕ್ಕಳಿಗೆ ಉತ್ತಮ ರೀತಿಯಲ್ಲಿ ಕಲಿಸಬೇಕು. ಗ್ರಾಮೀಣ ಭಾಗದಲ್ಲಿ ಬಡ ಮಕ್ಕಳು ಹೆಚ್ಚಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಬೋಧನೆ ಮಾಡಿ ಮಕ್ಕಳಲ್ಲಿ ಕಲಿಕೆ ಆಸಕ್ತಿ ಹೆಚ್ಚಿಸಬೇಕು ಎಂದರು.
ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಬೇಕು. ಶಿಕ್ಷಕರು ಸರ್ಕಾರದಿಂದ ಶಾಲೆಗಳಿಗೆ ಸಿಗುವ ಸವಲತ್ತುಗಳನ್ನು ಮಕ್ಕಳಿಗೆ ತಲುಪಿಸುವ ಮೂಲಕ ಸರ್ಕಾರಿ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.
ಪಟ್ಟಣದ ವಿವಿಧೆಡೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು, ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಬೇಕು. ರಾಜ್ಯದಲ್ಲಿ ಡೆಂಘೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಚರಂಡಿಗಳಲ್ಲಿ ಸೊಳ್ಳೆಗಳು ಬಾರದಂತೆ ಕ್ರಮ ಕೈಗೊಳ್ಳಬೇಕೆಂದು ಪುರಸಭಾ ಮುಖ್ಯಾಧಿಕಾರಿ ಪ್ರದೀಪ್ ಕುಮಾರ್ ಅವರಿಗೆ ಸೂಚಿಸಿದರು.
ಬಳಿಕ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಅಭಿಲೇಖಾಲಯ ಇಲಾಖೆ ಮತ್ತು ಭೂ ಸರ್ವೇ ಇಲಾಖೆ ಹಾಗೂ ಬಿಇಒ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಿದರು.
ಪುರಸಭಾ ಮುಖ್ಯಾಧಿಕಾರಿ ಪ್ರದೀಪ್‌ಕುಮಾರ್, ಸದಸ್ಯ ಶ್ರೀನಿವಾಸ್, ಅದ್ವಿಕ್ ಫೌಂಡೇಶನ್ ಅಧ್ಯಕ್ಷ ಮಂಜುನಾಥ್, ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net