ಮಹಾರಾಷ್ಟ್ರದಲ್ಲಿ ಮತ್ತೆ ಫಡ್ನವಿಸ್​ ಸರ್ಕಾರ: ಮುಖ್ಯಮಂತ್ರಿಯಾಗಿ ಇಂದು ಸಂಜೆಯೇ ಪದಗ್ರಹಣ

Fadnavis
Published on

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೆಗೂ ಇತ್ಯರ್ಥಗೊಂಡಿದ್ದು, ಸದ್ಯ ಎರಡನೇ ಬಾರಿ ದೇವೇಂದ್ರ ಫಡ್ನವಿಸ್​ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ.

ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್​​ ಹಾಗೂ ಡಿಸಿಎಂ ಆಗಿ ಏಕನಾಥ್​ ಶಿಂಧೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸರ್ಕಾರ ರಚಿಸಲು ಮುಂದಾಗಿರುವ ಫಡ್ನವಿಸ್​​​ ಹಾಗೂ ಏಕನಾಥ್ ಶಿಂಧೆ ರಾಜಭವನಕ್ಕೆ ತೆರಳಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ರಾಜಭವನದಲ್ಲಿ ಗುರುವಾರ ಸಂಜೆ 7 ಗಂಟೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜತೆಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಫಡ್ನವಿಸ್​ ಅವರನ್ನು ಇಂದು ಬೆಳಗ್ಗೆ ಭೇಟಿಯಾಗಿದ್ದ ಏಕನಾಥ್​ ಶಿಂಧೆ ಸರ್ಕಾರ ರಚನೆ ಸೇರಿದಂತೆ ಇಂದೇ ಅಧಿಕಾರ ಸ್ವೀಕರಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದರು. (ಏಜೆನ್ಸೀಸ್​) 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net