ವಿದ್ಯಾರ್ಥಿಗಳು ಆಧುನಿಕ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ; ಸಿ.ಆರ್. ಪಾಟೀಲ

6-RNR-03
Published on

ರಾಣೆಬೆನ್ನೂರ: ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪೂರಕವಾದ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಗ್ರಂಥಾಲಯ, ಲ್ಯಾಬರೋಟರಿ ಸೇರಿ ಇತರ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವೆಂಕಟೇಶ್ವರ ಶಿಕ್ಷಣ ಸಂಸ್ಥೆ ಚೇರ್ಮನ್ ಸಿ.ಆರ್. ಪಾಟೀಲ ಹೇಳಿದರು.
ನಗರದ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ದೇವಿಕಾ ಪದವಿ ಪೂರ್ವ ಕಾಲೇಜ್‌ನ (ಮಾಸ್ಟರ್ ಅವ್ಯಾನ) ನೂತನ ಕಟ್ಟಡಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಆಧುನಿಕ ಸೌಲಭ್ಯ ಹಾಗೂ ತಂತ್ರಜ್ಞಾನಗಳೊಂದಿಗೆ ಕಟ್ಟಡ ನಿರ್ಮಿಸಿದ್ದು, ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿದೆ ಎಂದರು.
ಸಂಸ್ಥೆಯ ಎಂ.ಡಿ. ಗಣೇಶ ಓದುಗೌಡರ, ಕಾರ್ಯದರ್ಶಿ ವಿಜಯಾ ಪಾಟೀಲ, ದೇವಿಕಾರಾಣಿ ಪಾಟೀಲ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net