ಕ್ರೀಡೆಯಿಂದ ಆತ್ಮವಿಶ್ವಾಸ ಇಮ್ಮಡಿಗೊಳ್ಳಲಿದೆ; ದೇವಿಕಾರಾಣಿ

8-RNR-04
Published on

ರಾಣೆಬೆನ್ನೂರ: ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿರುತ್ತದೆ. ಕ್ರೀಡೆಗಳಲ್ಲಿ ಭಾಗಿಯಾಗುವುದರಿಂದ ಆತ್ಮವಿಶ್ವಾಸ ಇಮ್ಮಡಿಗೊಳ್ಳುವುದರ ಮೂಲಕ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಲು ಸಾಧ್ಯ ಎಂದು ದೇವಿಕಾ ಶಾಲೆಯ ಕಾರ್ಯನಿರ್ವಹಣಾಧಿಕಾರಿ ದೇವಿಕಾರಾಣಿ ಪಾಟೀಲ ಹೇಳಿದರು.
ನಗರದ ದೇವಿಕಾ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ 2023-24ನೇ ಸಾಲಿನ ಮಂಡಲ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಹೆಚ್ಚಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಆರೋಗ್ಯವಂತರಾಗಿರಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಸೋಲು ಗೆಲುವು ನೋಡದೆ ಮೊದಲು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಗಣೇಶ ಓದುಗೌಡರ ಮಾತನಾಡಿ, ಆಟದಲ್ಲಿ ಪಾಲ್ಗೊಳ್ಳುವ ಎಲ್ಲ ಕ್ರೀಡಾಪಟುಗಳು ಮೊದಲು ಕ್ರೀಡಾ ಮನೋಭಾವನೆಯನ್ನು ಹೊಂದಬೇಕು. ಕ್ರೀಡಾಸ್ಪೂರ್ತಿಯನ್ನು ಮೆರೆದರೆ ಯಶಸ್ಸು ಸಾಧಿಸಲು ಸಾಧ್ಯ. ನಿರ್ಣಾಯಕರ ತೀರ್ಪಿಗೆ ತಲೆಬಾಗಿ ಉತ್ತಮ ಆಟವನ್ನು ಪ್ರದರ್ಶಿಸಬೇಕು ಅಂದಾಗ ತಾವುಗಳ ಕ್ರೀಡೆಯಲ್ಲಿ ಭಾಗವಹಿಸಿದ್ದಕ್ಕೂ ಸಾರ್ಥಕವಾಗುತ್ತದೆ ಎಂದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗಂಗಪ್ಪ ನಾಯಕ ಧ್ವಜಾರೋಹಣ ನೆರವೇರಿಸಿದರು.
ಮಂಡಲಮಟ್ಟದ ಎಲ್ಲ ಪ್ರೌಢಶಾಲೆಗಳ ದೈಹಿಕ ಶಿಕ್ಷಕರು, ದೇವಿಕಾ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net