ಡಿಜಿ-ಐಜಿಪಿ ಅಧಿಕಾರವಧಿ ನಾಲ್ಕು ತಿಂಗಳು ವಿಸ್ತರಣೆ?

alokmohan
Published on

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಅಧಿಕಾರಾವಧಿ 4 ತಿಂಗಳು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಏಪ್ರಿಲ್ 30ಕ್ಕೆ ಸೇವಾನಿವೃತ್ತಿ ಹೊಂದಬೇಕಿದೆ. ಸುಪ್ರೀಂಕೋರ್ಟ್ ಆದೇಶದ ಅನ್ವಯ ಅಧಿಕಾರ ಅವಧಿ ಆಗಸ್ಟ್‌ವರೆಗೆ ವಿಸ್ತರಣೆ ಆಗಲಿದೆ ಎಂಬ ಚರ್ಚೆ ನಡೆದಿದೆ. ಈ ಸಂಬಂಧ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್, 4 ತಿಂಗಳು ಅವಧಿ ವಿಸ್ತರಣೆಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕನಿಷ್ಠ 2 ವರ್ಷಗಳ ಅಧಿಕಾರ ಅವಧಿ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಕೇಂದ್ರ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ಪ್ರವೀಣ್ ಸೂದ್ ತೆರಳಿದ ಬಳಿಕ ತೆರವಾದ ಡಿಜಿ-ಐಜಿಪಿ ಹುದ್ದೆಗೆ 2023ರ ಮೇ 23ರಂದು ಸೇವಾ ಹಿರಿತನದ ಆಧಾರದ ಮೇರೆಗೆ ನೇಮಕ ಮಾಡಲಾಗಿತ್ತು.

ಮೊದಲು ಪ್ರಭಾರ ಡಿಜಿಪಿಯಾಗಿ ಕಾರ್ಯನಿರ್ವಹಿಸಿ 4 ತಿಂಗಳ ಬಳಿಕ ಹುದ್ದೆ ಕಾಯಂಗೊಂಡಿತು. ಪ್ರಭಾರ ಅವಧಿಯನ್ನು ಪರಿಗಣಿಸದೆ ಕಾಯಂ ಅವಧಿ ಮಾತ್ರ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದಾರೆ. ಈ ಮನವಿಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಇಲಾಖೆಯಲ್ಲಿ ಕೆಲ ಹಿರಿಯ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net