ಮನೆಯೂಟಕ್ಕೆ ನಿರಾಕರಿಸಿದ ಡಿಜಿಪಿ..?

Darshan
Published on

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್‌ಗೆ ಮನೆ ಊಟ ನೀಡಲು ಬಂಧೀಖಾನೆ ಇಲಾಖೆ ನಿರಾಕರಿಸಿದೆ.

ಜೈಲಿನಲ್ಲಿ ಮನೆಯೂಟ, ಹಾಸಿಗೆ, ಬಟ್ಟೆ ನೀಡುವಂತೆ ಕೋರಿ ನಟ ದರ್ಶನ್, ಕಾರಾಗೃಹ ಇಲಾಖೆಗೆ ಪತ್ರ ಬರೆದಿದ್ದರು. ಅಲ್ಲದೆ, ಹೈಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ಕಾನೂನು ಇಲಾಖೆಗೆ ವರದಿ ಸಲ್ಲಿಸಿರುವ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ, ಜೈಲಿನ ವೈದ್ಯಾಧಿಕಾರಿಗಳ ವರದಿ ಆಧರಿಸಿ ವರದಿ ಸಲ್ಲಿಸಿದ್ದಾರೆ. ಆರೋಪಿ ದರ್ಶನ್‌ಗೆ ಈಗ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ.

ಮನೆಯೂಟ ಕೊಡುವ ಪರಿಸ್ಥಿತಿ ಎದುರಾಗಿಲ್ಲ ಎಂದು ಹಿಂಬರಹ ನೀಡಿದ್ದಾರೆ. ಇದೇ ವಿಚಾರವಾಗಿ ಹೈಕೋರ್ಟ್‌ನಲ್ಲಿ ಆ.20ಕ್ಕೆ ಪ್ರಕರಣ ವಿಚಾರಣೆಗೆ ಬರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net