ಧರ್ಮಸ್ಥಳ ಸಂಘದಿಂದ ವರಮಹಾಲಕ್ಷ್ಮೀ ಪೂಜೆ ಸೆ. 9ರಂದು

Published on

ರಾಣೆಬೆನ್ನೂರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಸೆ. 9 ರಂದು ಬೆಳಗ್ಗೆ 8ರಿಂದ 11 ಗಂಟೆಯವರೆಗೆ ನಗರದ ಹೊರವಲಯದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಮಾರಂಭ ಜರುಗಲಿದೆ.
ಸ್ಥಳೀಯ ವಿರಕ್ತಮಠದ ಗುರುಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಪ್ರಕಾಶ ಕೋಳಿವಾಡ, ರುಕ್ಮಿಣಿ ಸಾವಕಾರ, ಮಂಜುನಾಥ ಗೌಡಶಿವಣ್ಣನವರ, ಭಾರತಿ ಜಂಬಗಿ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net