ಮಹಾಶಿವರಾತ್ರಿಯಂದೇ ಧರ್ಮಸ್ಥಳದ ಹಿರಿಯ ಆನೆ ಲತಾ ಸಾವು

Elephant Latha
Published on

ಧರ್ಮಸ್ಥಳ: ಮಹಾಶಿವರಾತ್ರಿಯ ದಿನದಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಹಿರಿಯ ಆನೆ ಲತಾ ಕೊನೆಯುಸಿರು ಎಳೆದಿದೆ. ಲತಾಗೆ 60 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.

ಸುದ್ದಿ ಮೂಲಗಳ ಪ್ರಕಾರ ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಲತಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಸೇವೆಯಲ್ಲಿ ನಿರತವಾಗಿತ್ತು.

ಧರ್ಮಸ್ಥಳದಲ್ಲಿ ಪ್ರಸ್ತುತ ಲತಾ, ಲಕ್ಷ್ಮೀ ಹಾಗೂ ಶಿವಾನಿ ಎಂಬ ಹೆಸರಿನ ಆನೆಗಳಿದ್ದು, ಲತಾ ಸಾವಿನಿಂದ ಲಕ್ಷ್ಮೀ ಹಾಗೂ ಶಿವಾನಿ ಆನೆಗಳು ಮಂಕಾಗಿವೆ. ಲತಾ ಆನೆಯ ಅಂತ್ಯಸಂಸ್ಕಾರ ಶುಕ್ರವಾರ ಸಂಜೆ ವೇಳೆಗೆ ನಡೆಯುವ ಸಾಧ್ಯತೆ ಇದೆ. ಆನೆ ಸಾವಿನ ಸುದ್ದಿ ತಿಳಿದು ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.

Elephant Latha
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net