4 ಸಾವಿರ ಗಿಡ ನೆಡುವ ಕಾರ್ಯಕ್ರಮ

nrp parisara
ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪಪಂ ಸದಸ್ಯೆ ಜುಬೇದಾ ಗಿಡ ನೆಟ್ಟರು. ಡಾ. ವಿಜಯಕುಮಾರ್, ಶಿವಕುಮಾರ್, ಸಿದ್ದಲಿಂಗಪ್ಪ, ವೀಣಾ , ಶಶಿಕಲಾ ಇತರರಿದ್ದರು.
Published on

ಎನ್.ಆರ್.ಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕಿನಲ್ಲಿ 4 ಸಾವಿರ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ಶಿವಕುಮಾರ್ ಹೇಳಿದರು.
ಶುಕ್ರವಾರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊಸ್ಕೆರೆ ಕಾರ್ಯ ಕ್ಷೇತ್ರದಿಂದ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆ ಅವರ ಆಶಯದಂತೆ ಭೂಮಿ ತಾಯಿಯನ್ನು ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ ಎಂಬ ಧ್ಯೇಯದೊಂದಿಗೆ ಪ್ರತಿ ವರ್ಷವೂ ಪರಿಸರ ಸಂರಕ್ಷಣೆಗೆ ಹಲವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ರಾಜ್ಯಾದ್ಯಂತ 4 ವರ್ಷಗಳಿಂದ ಪರಿಸರ ಸಂರಕ್ಷಣೆಗೆ ಜಾಗೃತಿ ಶಿಬಿರ ಏರ್ಪಡಿಸಲಾಗಿದೆ ಎಂದರು.
ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ವಿಜಯಕುಮಾರ್, ಪಪಂ ಸದಸ್ಯೆ ಜುಬೇದಾ ಗಿಡಗಳನ್ನು ನೆಟ್ಟರು. ಆಸ್ಪತ್ರೆ ಆವರಣದಲ್ಲಿ ನಿಂಬೆ, ಕರಿಬೇವು, ಕಿತ್ತಲೆ, ಹಲಸು, ಸೀಬೆ, ಬಾದಾಮಿ, ಗೋಡಂಬಿ ಮುಂತಾದ ಗಿಡಗಳನ್ನು ನೆಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಸಿದ್ದಲಿಂಗಪ್ಪ, ಸೇವಾಪ್ರತಿನಿಧಿಗಳಾದ ವೀಣಾ, ಶಶಿಕಲಾ, ವಿಪತ್ತು ನಿರ್ವಹಣಾ ತಂಡದ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net