ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

cm siddaramaiah
ಸಿಎಂ ಸಿದ್ದರಾಮಯ್ಯ
Published on


ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ. ಕೆಲವು ತನಿಖೆಗಳು ನಡೆಯುತ್ತಿವೆ ೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಘವೇಂದ್ರ ಸಹಕಾರ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಆದರೆ, ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. ನಮ್ಮ ಅವಧಿಯಲ್ಲಿ 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಇದೇ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐಯನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಮೇಲೆ ಇವರಿಗೇನು ಪ್ರೀತಿ? ಎಂದು ಕುಟುಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net