

ಮಂಗಳೂರು: ದಿಗ್ವಿಜಯ ನ್ಯೂಸ್ 24ಗಿ7ನ ಹಳೇ ವಿಡಿಯೋ ಹಾಕಿ ಮಸೀದಿಗಳಲ್ಲಿ ಶುಕ್ರವಾರದ ಜಮಾ ನಮಾಜ್ಗೆ ಲಾಕ್ಡೌನ್ ಸಡಿಲಿಸಲಾಗಿದೆ ಎಂದು ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸಿದ ದುಷ್ಕರ್ವಿುಗಳ ವಿರುದ್ಧ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.
ಸುಳ್ಳು ಸುದ್ದಿ ವಿಚಾರ ಗಮನಕ್ಕೆ ಬಂದ ತಕ್ಷಣ ಪೊಲೀಸ್ ಆಯುಕ್ತ ಡಾ.ಹರ್ಷ, ಪಿ.ಎಸ್.ಮುಸ್ಲಿಂ ಸೆಂಟ್ರಲ್ ಕಮಿಟಿ, ಮುಖಂಡರನ್ನು ಸಂರ್ಪಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರನ್ನು ಸಂರ್ಪಸಿ, ಪ್ರತಿಯೊಬ್ಬರೂ ಮನೆಯಲ್ಲೇ ಜಮಾ ನಮಾಜ್ ಮಾಡಬೇಕು.
ಈ ಹಿಂದಿನ ಸೂಚನೆಯಲ್ಲಿ ಬದಲಾವಣೆ ಇಲ್ಲ ಎಂದು ಹೇಳಿಕೆ ನೀಡುವ ಮೂಲಕ ಸಮುದಾಯದಲ್ಲಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದರು.