ಮಸುಕಾಗಿದ್ದ ಅನುಮಾನ ಈಗ ತೀಕ್ಷ್ಣವೆಂದ ಡಿಕೆಶಿ

Dk Shivakumar
Published on

ಬೆಂಗಳೂರು: ಬೆಂಗಳೂರು: ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್ ಬಗ್ಗೆ ಉದ್ಯಮಿ ಎಲಾನ್ ಮಸ್ಕ್ ಅನುಮಾನ ಪಡಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ.

ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್ ಮಸ್ಕ್ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ. ಮಸುಕಾಗಿದ್ದ ಅನುಮಾನ ಈಗ ತೀಕ್ಷ್ಣವೆಂದು ಡಿಕೆಶಿ ಹೇಳಿದ್ದಾರೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net