

ಮೇಷ: ನ್ಯಾಯವಾದಿಗಳಿಗೆ ಸ್ವಪ್ರಯತ್ನದಿಂದ ಕಾರ್ಯ ಕ್ಷೇತ್ರಗಳಲ್ಲಿ ಮುನ್ನಡೆ. ಮಕ್ಕಳಿಂದಲೇ ವಾದ- ವಿವಾದಗಳು ಹೆಚ್ಚಾಗಬಹುದು. ಶುಭಸಂಖ್ಯೆ: 4
ವೃಷಭ: ಮುಕ್ತ ಭಾವನೆಯಿಂದ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವಿರಿ. ವ್ಯವಹಾರದಲ್ಲಿ ನಿಮ್ಮ ಪ್ರಯತ್ನದಿಂದ ಹೆಚ್ಚು ಲಾಭ ಬರಲಿದೆ. ಶುಭಸಂಖ್ಯೆ: 5
ಮಿಥುನ: ಹಿರಿಯರ ಸಕಾಲಿಕ ಸಲಹೆಗಳಿಂದ ಆಗಬಹುದಾಗಿದ್ದ ನಷ್ಟ ತಪ್ಪಿಸಿಕೊಳ್ಳುವಿರಿ. ಮಕ್ಕಳ ಆರೋಗ್ಯದತ್ತ ಹೆಚ್ಚಿನ ಗಮನ ಅಗತ್ಯ. ಶುಭಸಂಖ್ಯೆ:1
ಕಟಕ: ಪದೇಪದೇ ನಿರ್ಧಾರ ಬದಲಿಸುವ ಅನಿರೀಕ್ಷಿತ ನಡವಳಿಕೆಯಿಂದಾಗಿ ಕುಟುಂಬದಲ್ಲಿ ಅಸಹನೆ. ಹೂವಿನ ವ್ಯಾಪಾರಿಗಳಿಗೆ ಲಾಭ. ಶುಭಸಂಖ್ಯೆ: 8
ಸಿಂಹ: ಯಾವುದೇ ವಿಚಾರದಲ್ಲಿ ಆತುರ ಬೇಡ. ಮಹಿಳೆಯರಿಗೆ ಕುಟುಂಬ ವ್ಯವಹಾರಗಳಲ್ಲಿ ತೃಪ್ತಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿ. ಶುಭಸಂಖ್ಯೆ: 3
ಕನ್ಯಾ: ಸ್ನೇಹಿತರೊಂದಿಗೆ ವಿಚಾರ ವಿನಿಮಯ. ಸಾಲ ಮರುಪಾವತಿ ಮಾಡಿ ಗೌರವ ಉಳಿಸಿಕೊಳ್ಳುವಿರಿ. ವಸ್ತ್ರ ವ್ಯಾಪಾರದಲ್ಲಿ ಆದಾಯ. ಶುಭಸಂಖ್ಯೆ: 2
ತುಲಾ: ಸಂಪನ್ಮೂಲ ಕ್ರೋಡೀಕರಿಸಲು ಹಲವು ಪ್ರಯತ್ನ ಗಳನ್ನು ಮಾಡುವಿರಿ. ಕೃಷಿಕರಿಗೆ ಬೆಲೆ ಕುಸಿತದ ಆತಂಕ ಎದುರಾಗಬಹುದು. ಶುಭಸಂಖ್ಯೆ:6
ವೃಶ್ಚಿಕ: ಅನಿರೀಕ್ಷಿತ ಮೂಲಗಳಿಂದ ಸಹಾಯ. ಬಾಹ್ಯಾಕಾಶ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ಬಡ್ತಿ. ಸರ್ಕಾರಿ ಕೆಲಸದಲ್ಲಿ ಮಂದಗತಿ. ಶುಭಸಂಖ್ಯೆ: 4
ಧನಸ್ಸು: ಕೆಲವೊಂದು ವಿಷಯಗಳಲ್ಲಿ ನೀವು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಸ್ವಲ್ಪ ಸಮಾಧಾನ ಚಿತ್ತದಿಂದ ವ್ಯವಹರಿಸಿರಿ. ಶುಭಸಂಖ್ಯೆ: 5
ಮಕರ: ಸತ್ಯಶೋಧನೆಯಿಂದ ತಲೆದೋರಿರುವ ಆಂತರಿಕ ಗೊಂದಲ ನಿವಾರಣೆ. ಹಣಕಾಸಿನ ವಿಷಯದಲ್ಲಿ ಸ್ವಲ್ಪ ಜಾಗರೂಕತೆ ಅಗತ್ಯ. ಶುಭಸಂಖ್ಯೆ: 7
ಕುಂಭ: ಕೃಷಿ ಯಂತ್ರದ ಬಾಡಿಗೆಯಿಂದ ಹೆಚ್ಚಿನ ಆದಾಯ ಬರಲಿದೆ. ಪ್ರೇಮದಲ್ಲಿ ಬಿದ್ದವರಿಗೆ ಹಿನ್ನಡೆ. ವಿದೇಶಿ ವ್ಯವಹಾರದಲ್ಲಿ ಮುನ್ನಡೆ. ಶುಭಸಂಖ್ಯೆ: 3
ಮೀನ: ನಿಮ್ಮ ಸಾಮರ್ಥ್ಯವನ್ನು ಅರಿತು ಕೆಲಸ ಕಾರ್ಯ ಗಳನ್ನು ಆಯ್ಕೆಮಾಡಿಕೊಳ್ಳಿ. ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಇರಲಿ. ಶುಭಸಂಖ್ಯೆ: 2