ನಿತ್ಯಭವಿಷ್ಯ: ಈ ರಾಶಿಯವರಿಂದು ಆತುರದ ನಿರ್ಧಾರ ಬೇಡ

Nitya Bhavisya Vijayavani
Published on

ಮೇಷ: ನ್ಯಾಯವಾದಿಗಳಿಗೆ ಸ್ವಪ್ರಯತ್ನದಿಂದ ಕಾರ್ಯ ಕ್ಷೇತ್ರಗಳಲ್ಲಿ ಮುನ್ನಡೆ. ಮಕ್ಕಳಿಂದಲೇ ವಾದ- ವಿವಾದಗಳು ಹೆಚ್ಚಾಗಬಹುದು. ಶುಭಸಂಖ್ಯೆ: 4

ವೃಷಭ: ಮುಕ್ತ ಭಾವನೆಯಿಂದ ಸಮಸ್ಯೆಗಳಿಗೆ ಪರಿಹಾರ. ಆಶ್ಚರ್ಯಕರ ರೀತಿಯಲ್ಲಿ ನಿಮ್ಮ ವಿರೋಧಿಗಳು ಸಹ ಬೆಂಬಲ ಸೂಚಿಸುವರು. ಶುಭಸಂಖ್ಯೆ: 7

ಮಿಥುನ: ಹಿರಿಯರ ಸಲಹೆಗಳಿಂದ ಆಗಬಹುದಾಗಿದ್ದ ನಷ್ಟವನ್ನು ತಪ್ಪಿಸಿಕೊಳ್ಳುವಿರಿ. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಶುಭಸಂಖ್ಯೆ: 1

ಕಟಕ: ಕರಿದ ಪದಾರ್ಥ ತಯಾರಿಸಿ ಮಾರುವವರಿಗೆ ಲಾಭ. ಸಗಟು ಹೂವಿನ ವ್ಯಾಪಾರಿಗಳಿಗೆ ವ್ಯವಹಾರ ಹೆಚ್ಚಾಗಿ ಲಾಭ ಬರುತ್ತದೆ. ಶುಭಸಂಖ್ಯೆ: 9

ಸಿಂಹ: ಯಾವುದೇ ವಿಚಾರದಲ್ಲಿ ಆತುರದ ನಿರ್ಧಾರ ಬೇಡ. ಮಹಿಳೆಯರಿಗೆ ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ. ಶುಭಸಂಖ್ಯೆ: 8

ಕನ್ಯಾ: ಬಹಳ ಕಾಡುತ್ತಿದ್ದ ಸಾಲಗಾರನಿಗೆ ಸಾಲ ಮರುಪಾವತಿ ಮಾಡಿ ಗೌರವ ಉಳಿಸಿಕೊಳ್ಳುವಿರಿ. ವಸ್ತ್ರ ವ್ಯಾಪಾರಿಗಳಿಗೆ ಆದಾಯ. ಶುಭಸಂಖ್ಯೆ: 4

ತುಲಾ: ಸ್ವಯಂ ಉದ್ಯೋಗ ಮಾಡುವವರಿಗೆ ಉತ್ತಮ ವ್ಯವಹಾರವಿರುತ್ತದೆ ಹಾಗೂ ಆದಾಯ ಹೆಚ್ಚುತ್ತದೆ. ಗೆಳೆಯರ ಜತೆ ಚರ್ಚೆ ಮಾಡಿ. ಶುಭಸಂಖ್ಯೆ: 1

ವೃಶ್ಚಿಕ: ಅನಿರೀಕ್ಷಿತ ಮೂಲಗಳಿಂದ ಆರ್ಥಿಕ ಸಹಾಯ ಒದಗುವ ಸಾಧ್ಯತೆ ಇದೆ. ಬಾಹ್ಯಾಕಾಶ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ಬಡ್ತಿ. ಶುಭಸಂಖ್ಯೆ: 7

ಧನಸ್ಸು: ಕೆಲವೊಂದು ವಿಷಯಗಳಲ್ಲಿ ನೀವು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಬ್ಯಾಂಕ್ ವ್ಯವಹಾರ ನಡೆಸುವವರಿಗೆ ಮುನ್ನಡೆ. ಶುಭಸಂಖ್ಯೆ: 6

ಮಕರ: ಸತ್ಯಶೋಧನೆಯಿಂದ ತಲೆದೋರಿರುವ ಆಂತರಿಕ ಗೊಂದಲಗಳ ನಿವಾರಣೆ. ಹಣಕಾಸಿನ ವಿಷಯದಲ್ಲಿ ಜಾಗರೂಕತೆ ಅಗತ್ಯ. ಶುಭಸಂಖ್ಯೆ: 7

ಕುಂಭ: ಕೃಷಿ ಯಂತ್ರಗಳನ್ನು ಹೊಂದಿರುವವರಿಗೆ ಬಾಡಿಗೆಯಿಂದ ಹೆಚ್ಚಿನ ಆದಾಯ ಇದೆ. ಪ್ರೇಮದಲ್ಲಿ ಬಿದ್ದವರಿಗೆ ಹಿನ್ನಡೆ ಇರುತ್ತದೆ. ಶುಭಸಂಖ್ಯೆ: 1

ಮೀನ: ನಿಮ್ಮ ಸಾಮರ್ಥ್ಯ ಅರಿತು ಕೆಲಸ ಕಾರ್ಯ ಆಯ್ಕೆಮಾಡಿಕೊಳ್ಳಿ. ನೌಕರರಿಗೆ ಬಯಸಿದ್ದ ಸ್ಥಳಕ್ಕೆ ವರ್ಗಾವಣೆಯಾಗುವ ಸಂಭವ.ಶುಭಸಂಖ್ಯೆ: 9

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net