ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್

WhatsApp Image 2024-04-22 at 2.22.13 PM
Published on

ಧಾರವಾಡ: ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿ- ಬಾಲೇಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಸೋಮವಾರ ನಾಮಪತ್ರ ವಾಪಸ್ ಪಡೆದಿದ್ದಾರೆ.

ಸ್ವಾಮೀಜಿ ಪರ ಏಜೆಂಟ್ ಸಚಿನ್ ಪಾಟೀಲ ಜಿಲ್ಲಾ ಚುನಾವಣಾಧಿ ಕಚೇರಿಗೆ ತೆರಳಿ ನಾಮಪತ್ರ ವಾಪಸ್ ಪಡೆದರು. ಸ್ವಾಮೀಜಿ ಸೂಚನೆಯಂತೆ ನಾಮಪತ್ರ ವಾಪಸ್ ಪಡೆದಿದ್ದೇವೆ. ಮುಂದಿನ ನಿರ್ಧಾರವನ್ನು ಸ್ವಾಮೀಜಿ ತಿಳಿಸುತ್ತಾರೆ ಎಂದು ಸಚಿನ್ ಪಾಟೀಲ ಪ್ರತಿಕ್ರಿಯಿಸಿದರು.

ಸ್ವಾಮೀಜಿ ಸ್ಪರ್ಧೆ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು. ಚುನಾವಣಾ ಪ್ರಕ್ರಿಯೆ ಆರಂಭವಾದಾಗ 'ಪ್ರಲ್ಹಾದ ಜೋಶಿ ಅವರನ್ನು ಸೋಲಿಸುವುದು ನನ್ನ ಗುರಿ' ಎಂದಿದ್ದರು. 'ಜೋಶಿಯನ್ನು ಸೋಲಿಸುವ ಗುರಿ ಇತ್ತು. ಈಗ ಗೆಲ್ಲಬೇಕು ಎನಿಸುತ್ತಿದೆ' ಎಂದು ಸ್ವಾಮೀಜಿ ಇತ್ತೀಚೆಗೆ ಹೇಳಿದ್ದರು.

ಸ್ವಾಮೀಜಿ ಸ್ಪರ್ದೆಯಿಂದ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಇದೀಗ ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದರಿಂದ ಬಿಜೆಪಿಯ ಪ್ರಲ್ಹಾದ ಜೋಶಿ ಹಾಗೂ ಕಾಂಗ್ರೆಸ್‌ನ ವಿನೋದ ಅಸೂಟಿ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net