

ಬೆಂಗಳೂರು: ಕರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರ್ಕಾರ, ಪ್ರಥಮ ಮತ್ತು ದ್ವಿತೀಯ ವರ್ಷದ ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಪರೀಕ್ಷೆ ರದ್ದು ಮಾಡಿದೆ. ಅಂತಿಮ ವರ್ಷದ ಪರೀಕ್ಷೆಯನ್ನು ಮಾತ್ರವೇ ನಡೆಸಲು ತೀರ್ಮಾನಿಸಿದೆ.
ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಇದನ್ನೂ ಓದಿರಿ ಕೆಎಸ್ಆರ್ಟಿಸಿ ಸಿಬ್ಬಂದಿಗೆ 1 ವರ್ಷ ವೇತನ ರಹಿತ ರಜೆ, ಲಕ್ಷಕ್ಕೂ ಹೆಚ್ಚು ನೌಕರರ ಪಾಲಿಗೆ ಮರಣಶಾಸನ?
ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ
ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್/ಆಪ್‌ಲೈನ್) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.
ತೇರ್ಗಡೆ ಮಾಡುವುದು ಹೇಗೆ?: ಮಧ್ಯಂತರ ಸೆಮಿಸ್ಟರ್/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್‌ಲಾಗ್ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದು ಡಿಸಿಎಂ ತಿಳಿಸಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಲ್ಪ್ ಲೈನ್ ಸಂಖ್ಯೆ- 080 22341394 ಸಂಪರ್ಕಿಸಬಹುದು.